ಇಸ್ಲಾಮಾಬಾದ್:ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಾಲ್ ಭುಟ್ಟೋ ಜರ್ದಾರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಗುರುವಾರ COVID-19 ಪರೀಕ್ಷೆ ಮಾಡಿಸಿಕೊಂಡಿದ್ದು ಫಲಿತಾಂಶ ಪಾಸಿಟಿವ್ ಬಂದಿದೆ ಎಂದು ಅಲ್ಲಿನ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿಗೆ COVID-19 - COVID-19 ಪರೀಕ್ಷೆ 2020
ಬಿಲಾವಲ್ ಭುಟ್ಟೋ ಜರ್ದಾರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಫಲಿತಾಂಶ ಪಾಸಿಟಿವ್ ಬಂದಿದ್ದರಿಂದ ಸ್ವತಃ ಹೋಂ ಕ್ವಾರಂಟೈನ್ ಆಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿ ನಿಮ್ಮ ಆರೋಗ್ಯದ ಬಗ್ಗೆ ಗಮನ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಲಾವಲ್ ಭುಟ್ಟೋ ಜರ್ದಾರಿ, ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಹಾಗಾಗಿ ನಾನು ನನ್ನ ಕೆಲಸವನ್ನು ಮನೆಯಿಂದಲೇ ಮುಂದುವರಿಸುತ್ತಿದ್ದೇನೆ ಎಂದಿದ್ದಾರೆ. ಅಲ್ಲದೇ ಸುರಕ್ಷಿತ ಮಾಸ್ಕ್ ಧರಿಸುವ ಮೂಲಕ ತಮ್ಮ ಆರೋಗ್ಯದ ಬಗ್ಗೆಯೂ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಪ್ರತಿ 100 ಸೆಕೆಂಡ್ಗೆ ಒಂದು ಮಗು ಅಥವಾ ಹದಿಹರೆಯರಿಗೆ ಹೆಚ್ಐವಿ: ಯುನಿಸೆಫ್
ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುವಂತೆ ಟ್ವೀಟ್ ಮಾಡಿರುವ ಪಿಪಿಪಿ ಪಕ್ಷದ ಮುಖಂಡರುಗಳು, ಕೊರೊನಾದಿಂದ ಬೇಗ ಗುಣಮುಖರಾಗಿ ಹೊರಬರುವಂತೆ ಶುಭಾಶಯ ತಿಳಿಸಿದ್ದಾರೆ. ಮಂಗಳವಾರ ತಮ್ಮ ರಾಜಕೀಯ ಕಾರ್ಯದರ್ಶಿ ಜಮೀಲ್ ಸೂಮ್ರೊ ಅವರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಆದ್ದರಿಂದ ಬಿಲಾವಲ್ ಭುಟ್ಟೋ ಜರ್ದಾರಿ ಕೂಡ ಕೋವಿಡ್ ಪರೀಕ್ಷೆಗೊಳಗಾಗಿದ್ದರು. ಫಲಿತಾಂಶ ಪಾಸಿಟಿವ್ ಬಂದಿದ್ದರಿಂದ ಸ್ವತಃ ಹೋಂ ಕ್ವಾರಂಟೈನ್ ಆಗಿದ್ದಾರೆ ಎನ್ನಲಾಗುತ್ತಿದೆ.