ಇಸ್ಲಾಮಾಬಾದ್(ಪಾಕಿಸ್ತಾನ):ರಷ್ಯಾ-ಉಕ್ರೇನ್ ಸಂಘರ್ಷದಿಂದಾಗಿ ಭಾರತ ಸೇರಿದಂತೆ ಅನೇಕ ದೇಶದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕೊಂಡಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ಬಹುತೇಕ ವಿದ್ಯಾರ್ಥಿಗಳ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಇದರಲ್ಲಿ ಪಾಕಿಸ್ತಾನದ ವಿದ್ಯಾರ್ಥಿನಿ ಅಸ್ಮಾ ಶಫೀಕ್ ಸಹ ಸೇರಿಕೊಂಡಿದ್ದಾರೆ.
ಉಕ್ರೇನ್ ರಾಜಧಾನಿ ಕೀವ್ನಲ್ಲಿ ವ್ಯಾಸಂಗ ಮಾಡ್ತಿದ್ದ ಪಾಕ್ನ ಅಸ್ಮಾ ಶಫೀಕ್ ಅವರನ್ನ ಭಾರತೀಯ ರಾಯಭಾರ ಕಚೇರಿ ಸುರಕ್ಷಿತವಾಗಿ ಸ್ಥಳಾಂತರ ಮಾಡಿದೆ. ಇದೀಗ ಪ್ರಧಾನಿ ಮೋದಿ ಹಾಗೂ ರಾಯಭಾರ ಕಚೇರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ. ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದ ನನ್ನನ್ನು ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದು, ಆದಷ್ಟು ಬೇಗ ಕುಟುಂಬ ಸೇರಿಕೊಳ್ಳಲಿದ್ದೇನೆ ಎಂದಿದ್ದಾರೆ.