ಕರ್ನಾಟಕ

karnataka

ETV Bharat / international

ಫುಟ್ಬಾಲ್​ ತಾರೆ ಪೀಲೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು - ಪೀಲೆ

ಮೂಲಗಳ ಪ್ರಕಾರ ಪೀಲೆ ಅವರು ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದು, ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೀಲೆ

By

Published : Apr 5, 2019, 11:33 AM IST

ಪ್ಯಾರಿಸ್​:ಬ್ರೆಜಿಲ್​ನ ಫುಟ್​ಬಾಲ್​ ದಂತಕತೆ ಪೀಲೆ ಅವರು ಶುಕ್ರವಾರ ಅನಾರೋಗ್ಯದಿಂದ ಅಸ್ವಸ್ಥಗೊಂಡಿದ್ದು ಅವರನ್ನು ಪ್ಯಾರಿಸ್​ನ ಆಸ್ಪತ್ರೆಗೆ ದಾಖಲಾಗಿದೆ.

ಮೂಲಗಳ ಪ್ರಕಾರ ಪೀಲೆ ಅವರು ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದು, ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೀಲೆ ಅವರು ಪ್ಯಾರಿಸ್​ನಲ್ಲಿ ಫುಟ್​ಬಾಲ್​ ತಂಡಗಳ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ಅಸ್ವಸ್ಥಗೊಂಡಿದ್ದರು ಎನ್ನಲಾಗಿದೆ.

ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದು, ರೋಗ ನಿರೋಧಕ ಔಷಧಗಳನ್ನು ನೀಡಲಾಗುತ್ತಿದೆ. ಎರಡು ಮೂರು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ABOUT THE AUTHOR

...view details