ಮಾಸ್ಕೋ(ರಷ್ಯಾ):ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಘೋಷಿಸಿದ ಬಳಿಕ ಆ ರಾಷ್ಟ್ರದ ಹಲವೆಡೆ ಸ್ಫೋಟದ ಸದ್ದು ಕೇಳಿ ಬಂದಿದೆ. ಇದರ ಜೊತೆಗೆ, ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ಶುರುವಾಗಿದೆ ಎಂದು ರಷ್ಯಾ ವಿದೇಶಾಂಗ ಸಚಿವರು ಹೇಳಿದ್ದಾರೆ.
ಉಕ್ರೇನ್ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸಲು ರಷ್ಯಾ ಮುಂದಾಗಿದೆ. ಇದರಲ್ಲಿ ವಿಶ್ವದ ಯಾವುದೇ ರಾಷ್ಟ್ರಗಳು ಮಧ್ಯಪ್ರವೇಶಿಸದಂತೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಬೆಳಗ್ಗೆಯಷ್ಟೇ ಎಚ್ಚರಿಕೆ ನೀಡಿದ್ದರು.
ಅಲ್ಲದೇ, ಇದರಲ್ಲಿ ಭಾಗಿಯಾಗುವ ರಾಷ್ಟ್ರಗಳು ಹಿಂದೆಂದೂ ಕಂಡರಿಯದ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದೂ ಗುಡುಗಿದ್ದರು. ಇದೀಗ ಉಕ್ರೇನ್ನ ರಾಜಧಾನಿ ಕೀವ್ ಮತ್ತು ಹಲವು ನಗರಗಳಲ್ಲಿ ರಷ್ಯಾ ಪಡೆಗಳು ಕ್ಷಿಪಣಿ ದಾಳಿ ನಡೆಸಿವೆ.