ಮಾಸ್ಕೋ(ರಷ್ಯಾ):ಉಕ್ರೇನ್ ಬಿಕ್ಕಟ್ಟಿನ ವಿಚಾರದ ಕುರಿತಂತೆ ಭಾರತದ ಸ್ವತಂತ್ರ(ತಟಸ್ಥ) ನಿಲುವನ್ನು ನಾವು ಸ್ವಾಗತಿಸುತ್ತೇವೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಉಭಯ ದೇಶಗಳ ನಡುವಿನ ವಿಶೇಷವಾದ ಪಾಲುದಾರಿಕೆಯನ್ನು ಭಾರತದ ಈ ನಡೆ ಪ್ರತಿಬಿಂಬಿಸುತ್ತದೆ ಎಂದು ರಷ್ಯಾ ಶ್ಲಾಫಿಸಿದೆ.
ಭಾರತವು ಜವಾಬ್ದಾರಿಯುತ ಜಾಗತಿಕ ಶಕ್ತಿಯಾಗಿ ಪ್ರಮುಖ ಪಾತ್ರ ವಹಿಸುತ್ತಿದೆ. ಜಾಗತಿಕ ವ್ಯವಹಾರಗಳಿಗೆ ಸ್ವತಂತ್ರ ಮತ್ತು ಸಮತೋಲಿತ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ರಷ್ಯಾ ಮಿಷನ್ನ ಉಪ ಮುಖ್ಯಸ್ಥ ರೋಮನ್ ಬಾಬುಶ್ಕಿನ್ ಹೇಳಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಈ ಹಿಂದೆ ಭಾರತವು ತೆಗೆದುಕೊಂಡ ಸ್ವತಂತ್ರ ನಿರ್ಧಾರಗಳನ್ನು ನಾವು ಸ್ವಾಗತಿಸುತ್ತೇವೆ ಎಂದು ರೋಮನ್ ಬಾಬುಶ್ಕಿನ್ ಆನ್‌ಲೈನ್ ಮಾಧ್ಯಮ ಸಂವಾದವೊಂದರಲ್ಲಿ ಹೇಳಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಚಟುವಟಿಕೆಗಳು ಉಭಯ ರಾಷ್ಟ್ರಗಳ ಪಾಲುದಾರಿಕೆಯನ್ನು ಸಂಪೂರ್ಣವಾಗಿ ಬಿಂಬಿಸುತ್ತವೆ ಎಂಬುದು ಅವರ ಅಭಿಪ್ರಾಯ.