ನವದೆಹಲಿ: ಉಕ್ರೇನ್ನಲ್ಲಿರುವ ಭಾರತೀಯರನ್ನು ಕರೆತರುವ ಸಲುವಾಗಿ ಕೇಂದ್ರ ಸರ್ಕಾರ 'ಆಪರೇಷನ್ ಗಂಗಾ' ಮಿಷನ್ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಉಕ್ರೇನ್ ನಗರಗಳಿಂದ ಸಮೀಪದ ಬೇರೆ ರಾಷ್ಟ್ರಗಳಿಗೆ ವಾಹನಗಳ ಮೂಲಕ ಭಾರತೀಯರನ್ನು ಸಾಗಿಸಿ, ಅಲ್ಲಿಂದ ಭಾರತಕ್ಕೆ ಏರ್ಲಿಫ್ಟ್ ಮಾಡಲಾಗುತ್ತಿದೆ. ಈ ವೇಳೆ ವಾಹನಗಳಲ್ಲಿ ಭಾರತೀಯ ಧ್ವಜವನ್ನು ಪ್ರದರ್ಶಿಸಲಾಗುತ್ತಿದೆ. ಈಗ ಭಾರತೀಯ ಧ್ವಜ ಬೇರೆ ದೇಶಗಳ ವಿದ್ಯಾರ್ಥಿಗಳನ್ನೂ ರಕ್ಷಿಸಿದೆ ಅನ್ನೋದು ವಿಶೇಷವಾಗಿದೆ.
ಹೌದು, ಭಾರತೀಯ ಧ್ವಜ ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ರಕ್ಷಿಸಿದ್ದು ಮಾತ್ರವಲ್ಲದೆ, ಉಕ್ರೇನ್‌ನಿಂದ ತಮ್ಮ ದೇಶಕ್ಕೆ ತೆರಳಲು ಪಾಕಿಸ್ತಾನಿ ಮತ್ತು ಟರ್ಕಿಶ್ ವಿದ್ಯಾರ್ಥಿಗಳಿಗೂ ಸಹಾಯ ಮಾಡಿದೆ ಎಂದು ಭಾರತೀಯ ವಿದ್ಯಾರ್ಥಿಯೊಬ್ಬರು ಎಎನ್ಐಗೆ ಮಾಹಿತಿ ನೀಡಿದ್ದಾರೆ.
ಉಕ್ರೇನ್‌ನಿಂದ ರೊಮೇನಿಯಾದ ಬುಕಾರೆಸ್ಟ್ ನಗರಕ್ಕೆ ಆಗಮಿಸಿದ ಭಾರತೀಯ ವಿದ್ಯಾರ್ಥಿಗಳು ಭಾರತೀಯ ಧ್ವಜವು ಕೆಲವು ಪಾಕಿಸ್ತಾನಿ ಮತ್ತು ಟರ್ಕಿಶ್ ವಿದ್ಯಾರ್ಥಿಗಳು ಉಕ್ರೇನ್ನ ವಿವಿಧ ಚೆಕ್‌ಪೋಸ್ಟ್‌ಗಳನ್ನು ಸುರಕ್ಷಿತವಾಗಿ ದಾಟಲು ಸಹಾಯ ಮಾಡಿತು. ಭಾರತದ ತ್ರಿವರ್ಣ ಧ್ವಜವನ್ನು ಟರ್ಕಿಶ್ ಮತ್ತು ಪಾಕಿಸ್ತಾನಿ ವಿದ್ಯಾರ್ಥಿಗಳು ಸಹ ಬಳಸುತ್ತಿದ್ದಾರೆ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.