ಮಾಸ್ಕೋ: ಸ್ವೀಡನ್ ಮತ್ತು ಫಿನ್‌ಲ್ಯಾಂಡ್ ರಾಷ್ಟ್ರಗಳು ನ್ಯಾಟೋಗೆ ಸೇರಲು ಉದ್ದೇಶಿಸಿದ್ದರೆ ರಷ್ಯಾ ಈ ಕುರಿತು 'ಪ್ರತಿಕ್ರಿಯೆ' ನೀಡಲಿದೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯದ ವಕ್ತಾರಾದ ಮಾರಿಯಾ ಜಖರೋವಾ ಶುಕ್ರವಾರ ಹೇಳಿದ್ದಾರೆಂದು ನ್ಯೂಸ್‌ವೀಕ್ ವರದಿ ಮಾಡಿದೆ.
ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದ ಕುರಿತಂತೆ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಮಾರಿಯಾ ಜಖರೋವಾ ಸ್ವೀಡನ್ ಮತ್ತು ಫಿನ್‌ಲ್ಯಾಂಡ್ ನ್ಯಾಟೋ ಸೇರಲು ಬಯಸಿದರೆ, ಗಂಭೀರವಾದ ಮಿಲಿಟರಿ ಮತ್ತು ರಾಜಕೀಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದಿದ್ದಾರೆ.