ಕೀವ್(ಉಕ್ರೇನ್): ಯುದ್ಧಪೀಡಿತ ಉಕ್ರೇನ್ ರಷ್ಯಾದ ಆಕ್ರಮಣದಿಂದ ತತ್ತರಿಸುತ್ತಿದೆ. ಯುದ್ಧ 7ನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನ್ನ ದಕ್ಷಿಣ ಭಾಗದಲ್ಲಿರುವ ಖೆರ್ಸನ್ ನಗರವನ್ನು ತನ್ನ ವಶಕ್ಕೆ ತೆಗೆದುಕೊಂಡಿರುವುದಾಗಿ ರಷ್ಯಾ ಸೇನೆ ಬುಧವಾರ ಹೇಳಿದೆ.
ರಷ್ಯಾ ಸಶಸ್ತ್ರ ಪಡೆಗಳು ಖೆರ್ಸನ್ ಪ್ರದೇಶವನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತೆಗೆದುಕೊಂಡಿವೆ ಎಂದು ರಷ್ಯಾ ರಕ್ಷಣಾ ಸಚಿವಾಲಯದ ವಕ್ತಾರ ಇಗೊರ್ ಕೊನಾಶೆಂಕೋವ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಖೆರ್ಸನ್ ನಗರವನ್ನು ವಶಕ್ಕೆ ತೆಗೆದುಕೊಂಡರೂ, ಸಾರ್ವಜನಿಕ ಸೇವೆಗಳು ಮತ್ತು ಸಾರಿಗೆ ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಇಗೊರ್ ಕೊನಾಶೆಂಕೋವ್ ಸ್ಪಷ್ಟನೆ ನೀಡಿದ್ದು, ಖೆರ್ಸನ್ ನಗರದಲ್ಲಿ ಆಹಾರ ಮತ್ತು ಅಗತ್ಯವಸ್ತುಗಳ ಕೊರತೆ ಇಲ್ಲ ಎಂದು ಮಾಹಿತಿ ನೀಡಿದ್ದಾರೆ.
ಪ್ರಸ್ತುತ ರಷ್ಯಾದ ಸೈನ್ಯ ಮತ್ತು ಸ್ಥಳೀಯ ಅಧಿಕಾರಿಗಳ ನಡುವೆ ಸಂಪರ್ಕ ಏರ್ಪಡಿಸುವುದು, ಜನರನ್ನು ರಕ್ಷಿಸುವುದು ಮತ್ತು ಸಾರ್ವಜನಿಕ ಸೇವೆಗಳನ್ನು ಪುನಾರಂಭಿಸುವ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ರಷ್ಯಾ ಉಕ್ರೇನ್ ಯುದ್ಧದಿಂದ ಅಂತಾರಾಷ್ಟ್ರೀಯ ಷೇರುಪೇಟೆಯಲ್ಲಿ ಭಾರಿ ಕುಸಿತ.. ಕಚ್ಚಾ ತೈಲ ಬೆಲೆ ಏರಿಕೆ