ಲಂಡನ್: ವಿಶ್ವದಾದ್ಯಂತ ಕೋವಿಡ್ 3ನೇ ಅಲೆ ಆರ್ಭಟಿಸುತ್ತಿದ್ದು, ಯುನೈಟೆಡ್ ಕಿಂಗ್ಡಮ್ನಲ್ಲಿ ಬುಧವಾರ ಬರೋಬ್ಬರಿ 1,94,747 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟಾರೆ ಯುಕೆಯಲ್ಲಿ ಸೋಂಕಿತರ ಸಂಖ್ಯೆ 1,38,35,334ಕ್ಕೆರ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಆಂಗ್ಲರ ನಾಡಿನಲ್ಲಿ 24 ಗಂಟೆಯ ಅವಧಿಯಲ್ಲಿ 334 ಮಂದಿ ಸಾಂಕ್ರಾಮಿಕಕ್ಕೆ ಬಲಿಯಾಗಿದ್ದು, ಒಟ್ಟು ಮೃತರಾದವರ ಸಂಖ್ಯೆ 1,49,284ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಲ್ಲಿ 17,276 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.