ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಏರ್‌ಲಿಫ್ಟ್ ಮಾಡುವ 'ಆಪರೇಷನ್ ಗಂಗಾ' ಯೋಜನೆಯನ್ನು ಕೇಂದ್ರ ಸರ್ಕಾರ ಚುರುಕುಗೊಳಿಸಿದೆ. ಈಗಾಗಲೇ ಹಲವು ವಿಮಾನಗಳ ಮೂಲಕ ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ವಾಪಸ್ ಕರೆ ತರಲಾಗಿದೆ.
ಇದೀಗ ವಾಯುಸೇನೆಯೂ ಅಖಾಡಕ್ಕೆ ಇಳಿದಿದೆ. ಮುಂದಿನ ದಿನಗಳಲ್ಲಿ ಒಟ್ಟು 31 ವಿಮಾನಗಳ ಮೂಲಕ 6,300ಕ್ಕೂ ಹೆಚ್ಚು ಭಾರತೀಯರನ್ನು ತಾಯ್ನಾಡಿಗೆ ಕಳುಹಿಸಲಾಗುತ್ತದೆ ಎಂದು ಉಕ್ರೇನ್‌ನಲ್ಲಿರುವ ರಾಯಭಾರಿ ಅಧಿಕಾರಿಗಳು ತಿಳಿಸಿದ್ದಾರೆ.
ಬುಕಾರೆಸ್ಟ್‌ನಲ್ಲಿ ಭಾರತಕ್ಕೆ ವಾಪಸ್ ಬರಲು ವಿದ್ಯಾರ್ಥಿಗಳು ಸಿದ್ಧರಾಗಿದ್ದಾರೆ. ಆಪರೇಷನ್ ಗಂಗಾ ಯೋಜನೆಯಲ್ಲಿ ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಇಂಡಿಗೋ, ಸ್ಪೈಸ್‌ಜೆಟ್ ಹಾಗೂ ಭಾರತೀಯ ವಾಯುಪಡೆಯ ವಿಮಾನಗಳು ಸೇರಿವೆ. ಇಂದಿನಿಂದ ರೊಮೇನಿಯಾದ ಬುಕಾರೆಸ್ಟ್‌ನಿಂದ 21, ಹಂಗೇರಿಯಾದ ಬುಡಾಪೆಸ್ಟ್, ಪೋಲೆಂಡ್‌ನಿಂದ ತಲಾ 4 ಹಾಗೂ ಸ್ಲೋವಾಕಿಯಾದ ಕೊಸಿಸ್‌ನಿಂದ 1 ವಿಮಾನದ ಮೂಲಕ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯರನ್ನು ಏರ್‌ಲಿಫ್ಟ್ ಮಾಡಲು ನಿರ್ಧರಿಸಲಾಗಿದೆ.