ಮಾಸ್ಕೋ(ರಷ್ಯಾ):ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಣೆಯ ನಂತರ ಪರಸ್ಪರ ಬಾಂಬ್ ದಾಳಿ ಆರಂಭವಾಗಿವೆ. ರಷ್ಯಾ ಕೆಲವು ಪ್ರದೇಶಗಳಲ್ಲಿ ಬಾಂಬ್ ದಾಳಿ ನಡೆಸಿದ್ದು, ಲುಹಾನ್ಸ್ಕ್ ಪ್ರದೇಶದಲ್ಲಿ ರಷ್ಯಾದ ಐದು ವಿಮಾನಗಳು ಮತ್ತು ಒಂದು ಹೆಲಿಕಾಪ್ಟರ್ ಹೊಡೆದುರುಳಿಸಲಾಗಿದೆ ಎಂದು ಉಕ್ರೇನ್ ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.
'ಉಕ್ರೇನ್ ವಾಯುನೆಲೆ ಮೇಲೆ ರಷ್ಯಾ ದಾಳಿ':ಉಕ್ರೇನ್ ಪಡೆಗಳ ಕಮಾಂಡ್ ಪ್ರಕಾರ, ಫೆಬ್ರವರಿ 24ರಂದು ರಷ್ಯಾ ಆಕ್ರಮಣಕಾರರ ಐದು ವಿಮಾನಗಳು ಮತ್ತು ಒಂದು ಹೆಲಿಕಾಪ್ಟರ್ ಹೊಡೆದುರುಳಿಸಲಾಗಿದೆ ಎಂದು ಸೇನಾ ಸಿಬ್ಬಂದಿ ಹೇಳಿಕೆ ನೀಡಿದ್ದಾರೆ. ಉಕ್ರೇನ್ ಹೇಳಿಕೆಯನ್ನು ಸಾರಾಸಾಗಟಾಗಿ ನಿರಾಕರಿಸಿರುವ ರಷ್ಯಾ, ಉಕ್ರೇನಿಯನ್ ವಾಯುನೆಲೆಗಳ ಮೇಲೆ ದಾಳಿ ನಡೆಸಿರುವುದಾಗಿ ತಿಳಿಸಿದೆ.
ಉಕ್ರೇನ್‌ನ ಇವಾನೊ-ಫ್ರಾಂಕಿವ್ಸ್ಕ್ ವಿಮಾನ ನಿಲ್ದಾಣ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿರುವ ವಿಡಿಯೋವನ್ನು ಅಮೆರಿಕ ಮೂಲದ ಬಿಎನ್ಒ ನ್ಯೂಸ್ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.