ಜಿನೀವಾ (ಸ್ವಿಟ್ಜರ್ಲೆಂಡ್); ಇನ್ನೂ ಲಸಿಕೆ ಹಾಕಿಸಿಕೊಳ್ಳದ ಜನರು ಒಮಿಕ್ರಾನ್ ಸೋಂಕಿಗೆ ಒಳಗಾದ ಬಳಿಕ ಕೋವಿಡ್ನಿಂದ ಹೆಚ್ಚಿನ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಈ ಬಗ್ಗೆ ಮಾತನಾಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್ ತಾಂತ್ರಿಕ ಮುಖ್ಯಸ್ಥ ಡಾ ಮರಿಯಾ ವ್ಯಾನ್ ಕೆರ್ಕೋವ್, ಹೊಸ ರೂಪಾಂತರಿ ಒಮಿಕ್ರಾನ್ ಅದೊಂದು ಸೌಮ್ಯ ಸ್ವಭಾವದ್ದು ಎಂದು ಪರಿಗಣಿಸುವುದು ಭಾರಿ ಅಪಾಯಕಾರಿ ಎಂದು ಎಚ್ಚರಿಕೆ ನೀಡಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಒಮಿಕ್ರಾನ್ ಸೋಂಕಿಗೆ ಒಳಗಾದ ಜನರು ರೋಗದ ಸಂಪೂರ್ಣ ಲಕ್ಷಣಗಳನ್ನು ಹೊಂದಿರುತ್ತಾರೆ, ಲಕ್ಷಣ ರಹಿತ ಸೋಂಕಿನಿಂದ ಹಿಡಿದು ತೀವ್ರತರವಾದ ಕಾಯಿಲೆ ಮತ್ತು ಸಾವಿನ ತನಕವೂ ಇರುತ್ತದೆ. ನಾವು ಕಲಿಯುತ್ತಿರುವ ವಿಷಯವೆಂದರೆ ಲಸಿಕೆ ಹಾಕಿಸಿಕೊಳ್ಳದ ಜನರು Omicron ತಗುಲಿದ ಬಳಿಕ ಕೋವಿಡ್ ಸಂಕಷ್ಟಕ್ಕೆ ಸಿಲುಕುತ್ತಾರೆ. ಮತ್ತು ಹೆಚ್ಚಿನವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಬಹುದು.
ಹಾಗಾಗಿ ಒಮಿಕ್ರಾನ್ ಬಗ್ಗೆ ಎಚ್ಚರಿಕೆಯಿಂದರಬೇಕು. ಇದು ಡೆಲ್ಟಾಕ್ಕಿಂತ ಕಡಿಮೆ ತೀವ್ರತೆ ಹೊಂದಿರಬಹುದು ಆದರೆ ಬಹಳ ಅಪಾಯಕಾರಿ ಮತ್ತು ಇದು ಮೈಲ್ಡ್ ಅಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಡಾ ಕೆರ್ಕೋವ್ ಎಚ್ಚರಿಕೆ ನೀಡಿದ್ದಾರೆ.