ಜಿನೀವಾ :ಟ್ರಂಪ್ ಆಡಳಿತವು ಅಮೆರಿಕವನ್ನ ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಗಿಡಲು ಪ್ರಯತ್ನಿಸುತ್ತಿರುವ ನಡುವೆಯೇ, ಕಾಂಗೋದಲ್ಲಿ ಕಾಣಿಸಿಕೊಂಡಿರುವ ಹೊಸ ಎಬೋಲಾ ವೈರಸ್ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವ ಕುರಿತು ಯುಎಸ್ ಆರೋಗ್ಯ ಮತ್ತು ಮಾನವ ಸೇವೆಗಳ ಕಾರ್ಯದರ್ಶಿ ಅಲೆಕ್ಸ್ ಅಜರ್ ಜೊತೆ ಚರ್ಚಿಸಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ತಿಳಿಸಿದ್ದಾರೆ.
ಎಬೋಲಾ ವಿರುದ್ಧದ ಹೋರಾಟಕ್ಕೆ ಅಮೆರಿಕ ಸಹಕಾರ ಕೋರಿದ WHO - ಯುಎಸ್ ಜೊತೆ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಚರ್ಚೆ
ಕಾಂಗೋದಲ್ಲಿ ಕಾಣಿಸಿಕೊಂಡಿರುವ ಎಬೋಲಾ ವೈರಸ್ ವಿರುದ್ಧ ಹೋರಾಡಲು ಯುಎಸ್ನಿಂದ ಸಹಕಾರ ಸಿಗುವ ಭರವಸೆಯಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ತಿಳಿಸಿದ್ದಾರೆ.

ಯುಎಸ್ ಜೊತೆ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಚರ್ಚೆ
ಅಜರ್ ಅವರೊಂದಿಗೆ ಉತ್ತಮ ಚರ್ಚೆ ನಡೆಸಿದ್ದೇನೆ. ಕಾಂಗೋದ ಈಕ್ವೆಟೂರ್ ಪ್ರಾಂತ್ಯದಲ್ಲಿ ಕಾಣಿಸಿಕೊಂಡಿರುವ ಹೊಸ ಎಬೋಲಾ ರೋಗದ ವಿರುದ್ಧ ಹೋರಾಡಲು ಯುಎಸ್ನ ಸಹಕಾರ ಸಿಗುವ ಭರವಸೆಯಿದೆ ಎಂದು ಘೆಬ್ರೆಯೆಸಸ್ ಹೇಳಿದ್ದಾರೆ.
ಕಾಂಗೋದ 9 ಲ್ಯಾಬ್ಗಳಲ್ಲಿ ಎಬೋಲಾ ಪ್ರಕರಣಗಳು ದೃಢಪಟ್ಟಿವೆ ಮತ್ತು ಮೂರು ಸಂಭವನೀಯ ಪ್ರಕರಣಗಳು ಪತ್ತೆಯಾಗಿವೆ ಎಂದು ಡಬ್ಲ್ಯುಹೆಚ್ಒ ತುರ್ತು ಮುಖ್ಯಸ್ಥ ಡಾ.ಮೈಕೆಲ್ ರಯಾನ್ ತಿಳಿಸಿದ್ದಾರೆ.