ಲಂಡನ್: ಮದ್ಯದ ದೊರೆ ವಿಜಯ್ ಮಲ್ಯಗೆ ಮತ್ತೆ ಭಾರಿ ಹಿನ್ನಡೆಯಾಗಿದೆ. ಭಾರತದ ಬ್ಯಾಂಕ್‌ಗಳಿಗೆ 9,000 ಕೋಟಿ ರೂ.ಗಳ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮನ್ನು ಭಾರತಕ್ಕೆ ಹಸ್ತಾಂತರಿಸುವ ಆದೇಶದ ವಿರುದ್ಧ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾಗೊಂಡಿದೆ.
ಮದ್ಯದ ದೊರೆಗೆ ಭಾರಿ ಹಿನ್ನಡೆ; ಲಂಡನ್ಕೋರ್ಟ್ನಲ್ಲಿ ಮಲ್ಯ ಮೇಲ್ಮನವಿ ಅರ್ಜಿ ವಜಾ - ವಿಜಯ್ ಮಲ್ಯ ಮೇಲ್ಮನವಿ ವಜಾ
ಭಾರತಕ್ಕೆ ತಮ್ಮನ್ನು ಹಸ್ತಾಂತರಿಸುವ ಆದೇಶದ ವಿರುದ್ಧ ಉದ್ಯಮಿ ವಿಜಯ್ ಮಲ್ಯ ಸೋಮವಾರ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯನ್ನು ಲಂಡನ್ ಕೋರ್ಟ್ ವಜಾಗೊಳಿಸಿದೆ.
ವಿಜಯ್ ಮಲ್ಯ ಮೇಲ್ಮನವಿ ವಜಾ
ಸ್ವದೇಶಕ್ಕೆ ಹಸ್ತಾಂತರಿಸುವ ಆದೇಶದ ವಿರುದ್ಧ ಮಲ್ಯ ಮೇಲ್ಮನವಿ ಸಲ್ಲಿಸಿದ್ದರು. ಸೋಮವಾರ ಅರ್ಜಿ ವಿಚಾರಣೆ ನಡೆಸಿದ ಲಂಡನ್‌ನ ಕೋರ್ಟ್ ಮೇಲ್ಮನವಿ ಅರ್ಜಿ ತಿರಸ್ಕರಿಸಿದೆ.
ಲಾರ್ಡ್ ಜಸ್ಟಿಸ್ ಸ್ಟೀಫನ್ ಇರ್ವಿನ್ ಮತ್ತು ನ್ಯಾಯಮೂರ್ತಿ ಎಲಿಜಬೆತ್ ಲಾಯಿಂಗ್ ಅವರನ್ನು ಒಳಗೊಂಡ ದ್ವಿಸದಸ್ಯ ನ್ಯಾಯಪೀಠ ಈ ನಿರ್ಧಾರ ಕೈಗೊಂಡಿದೆ. ಕೋವಿಡ್19 ಮಹಾಮಾರಿ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಅರ್ಜಿ ವಿಚಾರಣೆ ನಡೆಸಿದ್ದಾರೆ.
Last Updated : Apr 20, 2020, 7:14 PM IST