ಜಿನೀವಾ :ಕೊರೊನಾ ವೈರಸ್ ಹರಡುವಿಕೆ ಬಗ್ಗೆ ಯುರೋಪಿಯನ್ ಯೂನಿಯನ್ (ಇಯು) ರಾಷ್ಟ್ರಗಳು ಜಾಗರೂಕರಾಗಿರಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.
ಪರಿಸರ, ಸಾರ್ವಜನಿಕ ಆರೋಗ್ಯ ಮತ್ತು ಆಹಾರ ಸುರಕ್ಷತೆ ಕುರಿತು ಯುರೋಪಿಯನ್ ಪಾರ್ಲಿಮೆಂಟ್ ಸಮಿತಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್, ಕೊರೊನಾ ವೈರಸ್ ಇನ್ನೂ ಹರಡುತ್ತಿದೆ. ಈ ಸೋಂಕು ಮಾರಕವಾಗಿದ್ದು, ಹೆಚ್ಚಿನ ಜನರು ಇನ್ನೂ ಸೋಂಕಿಗೆ ತುತ್ತಾಗುವ ಸಾಧ್ಯೆತೆ ಇದೆ ಎಂದು ಹೇಳಿದ್ದಾರೆ.