ಕರ್ನಾಟಕ

karnataka

ETV Bharat / international

ಮುಂದಿನ 24 ಗಂಟೆ ನಮಗೆ ನಿರ್ಣಾಯಕ: ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್

ರಷ್ಯಾ-ಉಕ್ರೇನ್​ ನಡುವಿನ ಬಿಕ್ಕಟ್ಟು ಮತ್ತಷ್ಟು ಉಲ್ಭಣಗೊಂಡಿದ್ದು, ಉಭಯ ದೇಶಗಳ ನಡುವಿನ ಸಂಘರ್ಷ ಇದೀಗ ತಾರಕಕ್ಕೇರಿದೆ. ಇದರ ಮಧ್ಯೆ ಮಾತನಾಡಿರುವ ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಮುಂದಿನ 24 ಗಂಟೆ ನಮಗೆ ನಿರ್ಣಾಯಕ ಎಂದು ತಿಳಿಸಿದ್ದಾರೆ.

Ukrainian President Volodymyr Zelensky
Ukrainian President Volodymyr Zelensky

By

Published : Feb 28, 2022, 3:53 PM IST

ಕೀವ್​(ಉಕ್ರೇನ್​): ರಷ್ಯಾ-ಉಕ್ರೇನ್​ ನಡುವಿನ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದ್ದು, ಇಲ್ಲಿಯವರೆಗೆ ಉಭಯ ದೇಶಗಳ ಮಧ್ಯೆ ಯಾವುದೇ ರೀತಿಯ ರಾಜತಾಂತ್ರಿಕ ಮಾತುಕತೆ ನಡೆದಿಲ್ಲ. ಈ ಮಧ್ಯೆ ಮಾತನಾಡಿರುವ ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಮುಂದಿನ 24 ಗಂಟೆ ನಮಗೆ ತುಂಬಾ 'ನಿರ್ಣಾಯಕ' ಎಂದು ಘೋಷಣೆ ಮಾಡಿದ್ದಾರೆಂದು ವರದಿಯಾಗಿದೆ. ಜೊತೆಗೆ ರಷ್ಯಾ ಕೂಡಲೇ ಕದನ ವಿರಾಮ ಘೋಷಣೆ ಮಾಡಲಿ ಎಂದು ಅವರು ಆಗ್ರಹಿಸಿದ್ದಾರೆ.

ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಜೊತೆ ದೂರವಾಣಿ ಮೂಲಕ ಮಾತನಾಡಿರುವ ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್,​​ ಮುಂದಿನ 24 ಗಂಟೆಗಳು ನಮಗೆ ನಿರ್ಣಾಯಕ ಎಂದು ಹೇಳಿದ್ದಾರೆಂದು ಅಲ್ಲಿನ ಸುದ್ದಿಸಂಸ್ಥೆವೊಂದು ವರದಿ ಮಾಡಿದೆ.

ಇದೇ ವೇಳೆ ಮಾತನಾಡಿರುವ ಬೋರಿಸ್​​ ಯುಕೆ ಹಾಗೂ ಮಿತ್ರರಾಷ್ಟ್ರಗಳು ಉಕ್ರೇನ್​ಗೆ ಎಲ್ಲ ರೀತಿಯಲ್ಲೂ ರಕ್ಷಣಾತ್ಮಕ ಸಹಾಯ ನೀಡಲು ಸಿದ್ಧರಾಗಿದ್ದೇವೆ ಎಂದು ಘೋಷಿಸಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಹಣಕಾಸು ವ್ಯವಸ್ಥೆಯಿಂದ ರಷ್ಯಾವನ್ನ ಪ್ರತ್ಯೇಕ ಮಾಡಲಾಗಿದ್ದು, ರಷ್ಯಾ ಅಧ್ಯಕ್ಷ ಪುಟಿನ್​ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾವು ನಿರ್ಧರಿಸಿದ್ದೇವೆ ಎಂದು ಬ್ರಿಟನ್ ಪ್ರಧಾನಿ ತಿಳಿಸಿದ್ದಾರೆ.

ಇದನ್ನೂ ಓದಿರಿ:ರಾಜಧಾನಿಗೆ ರಷ್ಯಾದ 'ವಿಧ್ವಂಸಕ ಗುಂಪುಗಳ' ಎಂಟ್ರಿ - ಆದ್ರೂ, ಕೀವ್​ನಲ್ಲೇ ಇರುವೆ ಎಂದ ಉಕ್ರೇನ್ ಅಧ್ಯಕ್ಷ

ರಷ್ಯಾ ಆಕ್ರಮಣದಿಂದಾಗಿ ಉಕ್ರೇನ್​ನಲ್ಲಿ ಇಲ್ಲಿಯವರೆಗೆ 14 ಮಕ್ಕಳು ಸೇರಿದಂತೆ 352 ನಾಗರಿಕರು ಸಾವನ್ನಪ್ಪಿದ್ದು, 1,684 ಜನರು ಗಾಯಗೊಂಡಿದ್ದಾರೆಂದು ಅಲ್ಲಿನ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ.

ABOUT THE AUTHOR

...view details