ಜೆರುಸಲೇಂ: ಉತ್ತರ ಇಸ್ರೇಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜನಸಂದಣಿಯಿಂದಾಗಿ ಕಾಲ್ತುಳಿತಕ್ಕೆ ಒಳಗಾಗಿ 40 ಜನರು ಮೃತಪಟ್ಟಿದ್ದು, 103 ಮಂದಿ ಗಾಯಗೊಂಡಿದ್ದಾರೆ.
ನಿನ್ನೆ ಲಾಗ್ ಬಿ ಒಮರ್ ರಜಾದಿನದ ಪ್ರಯುಕ್ತ ಮೌಂಟ್ ಮೆರಾನ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೃಹತ್ ಸಂಖ್ಯೆಯಲ್ಲಿ ಅಲ್ಲಿ ಜನರು ನೆರೆದಿದ್ದರು. ಈ ವೇಳೆ ಕಾಲ್ತುಳಿತಕ್ಕೆ ಜನರು ಒಳಗಾಗಿದ್ದಾರೆ. ಆದರೆ ದಿಢೀರ್ ಕಾಲ್ತುಳಿತ ಸಂಭವಿಸಲು ಕಾರಣವೇನು ಎನ್ನುವುದರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.