ಕಾಬೂಲ್: ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 29 ಜನ ಮೃತಪಟ್ಟು, 61 ಜನ ಗಾಯಗೊಂಡ ಘಟನೆ ಅಫ್ಘಾನಿಸ್ತಾನದ ಕಾಬೂಲ್ನಲ್ಲಿ ನಡೆದಿದೆ.
ಹಜಬ್ ಇ ವದತ್ ಪಾರ್ಟಿಯ ನಾಯಕ ಅಬ್ದುಲ್ ಅಲಿ ಮಜಾರಿ ಅವರ ಪುಣ್ಯತಿಥಿ ಸಮಾರಂಭದ ಮೇಲೆ ಉಗ್ರರು ದಾಳಿ ಮಾಡಿದ್ದಾರೆ.

ಗಾಯಾಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಟ್ವೀಟ್ ಮಾಡಿ, ದಾಳಿಯನ್ನು ಖಂಡಿಸಿದ್ದಾರೆ. ಇದು ದೇಶದ ಏಕತೆಯ ಹಾಗೂ ಮಾನವೀಯತೆ ವಿರುದ್ಧದ ದಾಳಿ ಎಂದಿದ್ದಾರೆ.
ಐಸಿಸ್ ಉಗ್ರ ಸಂಘಟನೆಯ ದಾಳಿ ಹೊಣೆ ಹೊತ್ತುಕೊಂಡಿದೆ ಎಂದು ವರದಿಯಾಗಿದೆ.