ಬೈರುತ್ (ಸಿರಿಯಾ): ವಾಯವ್ಯ ಸಿರಿಯಾದಲ್ಲಿರುವ ಬಂಡುಕೋರರ ತರಬೇತಿ ಶಿಬಿರದ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ ಎಂದು ಸಿರಿಯಾ ಸರ್ಕಾರ ಮಾಹಿತಿ ನೀಡಿದೆ.
ಇಡ್ಲಿಬ್ ಪ್ರಾಂತ್ಯದಲ್ಲಿ ವೈಮಾನಿಕ ದಾಳಿ ನಡೆಸಲಾಗಿದ್ದು, ಟರ್ಕಿ ಬೆಂಬಲಿತ ಫಾಲಿಕ್ ಅಲ್ ಶಾಮ್ ಸಂಘಟನೆಯ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಸಂಘಟನೆಯ ಕೆಲವು ನಾಯಕರು ಸಾವನ್ನಪ್ಪಿದ್ದಾರೆ. ಅವರಲ್ಲಿ ಜಬಲ್ ಅಲ್ ದ್ವೇಲಿಯಾ ಕೂಡಾ ಒಬ್ಬರು ಎಂದು ಹೇಳಲಾಗಿದೆ.