ಕ್ಯಾನ್ಬೆರಾ:ಸಂಸತ್ತಿನಲ್ಲಿ ಅತ್ಯಾಚಾರಕ್ಕೊಳಗಾಗಿದ್ದೆ ಎಂದು ಹೇಳಿಕೆ ನೀಡಿದ್ದ ಮಹಿಳೆಯ ಬಳಿ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಇದೀಗ ಕ್ಷಮೆಯಾಚನೆ ಮಾಡಿದ್ದಾರೆ. ಜತೆಗೆ ಪ್ರಕರಣದ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ಪ್ರಧಾನಿ ಕಚೇರಿಯ ಸಿಬ್ಬಂದಿಯಿಂದ ತಾನು ಅತ್ಯಾಚಾರಕ್ಕೊಳಗಾಗಿದ್ದೆ ಎಂದು ಮಹಿಳೆ ಹೇಳಿಕೊಂಡಿದ್ದಳು. ಜತೆಗೆ ತಾನು ಕೆಲಸ ಕಳೆದುಕೊಳ್ಳುವ ಭಯದಲ್ಲಿ ಇದರ ಬಗ್ಗೆ ಯಾರಿಗೂ ಮಾಹಿತಿ ನೀಡಿರಲಿಲ್ಲ ಎಂದು ಆಕೆ ಇದೀಗ ಹೇಳಿಕೊಂಡಿದ್ದಾಳೆ. 2019ರಲ್ಲಿ ನಡೆದ ಘಟನೆ ಇದಾಗಿದೆ ಎಂದು ಟಿವಿ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಳು. 2019ರ ಮಾರ್ಚ್ನಲ್ಲಿ ಮೋರಿಸ್ನರ ಆಡಳಿತಾರೂಢ ಲಿಬರಲ್ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತಾವು ಸಂಸತ್ನೊಳಗೆ ಅತ್ಯಾಚಾರಕ್ಕೊಳಗಾಗಿದ್ದಾಗಿ ಆಕೆ ಹೇಳಿಕೊಂಡಿದ್ದಳು.