ನವದೆಹಲಿ: ಜಮ್ಮು ಕಾಶ್ಮೀರ ಕುರಿತು ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಅವರ ಟೀಕೆಗಳನ್ನು ಭಾರತ ಬುಧವಾರ ತಿರಸ್ಕರಿಸಿದೆ. ಇತರ ದೇಶಗಳಿಗೆ ತನ್ನ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ಯಾವುದೇ ಸ್ಥಾನ, ಅವಕಾಶ ಇಲ್ಲ ಎಂದು ಒತ್ತಿ ಹೇಳಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ತನ್ನ ಹೇಳಿಕೆಯಲ್ಲಿ, ಇಸ್ಲಾಮಾಬಾದ್‌ನಲ್ಲಿ ನಡೆದ ಒಐಸಿ ಸಭೆಯ ಉಧ್ಘಾಟನಾ ಸಮಾರಂಭದಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಅವರಿಗೆ ಜಮ್ಮು ಕಾಶ್ಮೀರದ ಬಗ್ಗೆ ಮಾತನಾಡಲು ನಾವು ಅವಕಾಶ ಕೊಟ್ಟಿಲ್ಲ ಎಂದು ಹೇಳಿದೆ.
ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ ವಿಷಯಗಳು ಸಂಪೂರ್ಣವಾಗಿ ಭಾರತದ ಆಂತರಿಕ ವ್ಯವಹಾರಗಳಾಗಿವೆ. ಚೀನಾ ಸೇರಿದಂತೆ ಇತರ ದೇಶಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಲು ಹಾಗೂ ಮಾತನಾಡುವ ಹಕ್ಕು ಹೊಂದಿಲ್ಲ ಎಂದು ಭಾರತ ಸ್ಪಷ್ಟ ಮಾತುಗಳಲ್ಲಿ ಹೇಳಿದೆ.