ಅಂಕಾರ(ಟರ್ಕಿ):ಟರ್ಕಿಯ ಪಶ್ಚಿಮ ಇಜ್ಮಿರ್ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ ಎಂದು ದೇಶದ ವಿಪತ್ತು ಮತ್ತು ತುರ್ತುಸ್ಥಿತಿ ನಿರ್ವಹಣಾ ಪ್ರಾಧಿಕಾರ (ಎಎಫ್ಎಡಿ ) ತಿಳಿಸಿದೆ.
ಪ್ರಬಲ ಭೂಕಂಪಕ್ಕೆ ನಲುಗಿದ ಟರ್ಕಿ: ಸಾವಿನ ಸಂಖ್ಯೆ 73ಕ್ಕೆ ಏರಿಕೆ - ಟರ್ಕಿ ಭೂಕಂಪ ಲೇಟೆಸ್ಟ್ ನ್ಯೂಸ್
ಟರ್ಕಿಯಲ್ಲಿ ಕಳೆದ ಶುಕ್ರವಾರ ಸಂಭವಿಸಿದ ಭೂಕಂಪ ಭಾರೀ ಅವಾಂತರ ಸೃಷ್ಟಿಸಿದ್ದು, ಮೃತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ.
ಪ್ರಬಲ ಭೂಕಂಪಕ್ಕೆ ನಲುಗಿದ ಟರ್ಕಿ
"ಇತ್ತೀಚಿನ ಮಾಹಿತಿಯ ಪ್ರಕಾರ, 73 ಜನರು ಸಾವನ್ನಪ್ಪಿದ್ದು, 961 ಮಂದಿ ಗಾಯಗೊಂಡಿದ್ದಾರೆ" ಎಂದು ಎಎಫ್ಎಡಿ ಹೇಳಿಕೆಯಲ್ಲಿ ತಿಳಿಸಿದೆ.
ಭೂಕಂಪನದಿಂದಾಗಿ ಸುಮಾರು 40ಕ್ಕೂ ಹೆಚ್ಚು ಕಟ್ಟಡಗಳು ಸಂಪೂರ್ಣವಾಗಿ ನಾಶವಾಗಿದ್ದು, ಆದರೆ ಒಂದು ಸಾವಿರಕ್ಕೂ ಹೆಚ್ಚು ಕಟ್ಟಡಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಟರ್ಕಿಯ ಪರಿಸರ ಮತ್ತು ನಗರೀಕರಣ ಸಚಿವ ಮುರತ್ ಕುರುಮ್ ಹೇಳಿದ್ದಾರೆ.