ತೆಹ್ರಾನ್(ಇರಾನ್): ಬಾಗ್ದಾದ್‌ನಲ್ಲಿ ವೈಮಾನಿಕ ದಾಳಿ ನಡೆಸಿ ಇರಾನ್ ಮಿಲಿಟರಿ ಉನ್ನತ ಅಧಿಕಾರಿಯನ್ನು ಕೊಂದ ಆರೋಪದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಹಲವು ಅಧಿಕಾರಿಗಳನ್ನು ಬಂಧಿಸಲು ಇರಾನ್ ಬಂಧನ ವಾರಂಟ್ ಹೊರಡಿಸಿದೆ ಎಂದು ಸ್ಥಳೀಯ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.
ಜನವರಿ 3 ರಂದು ಬಾಗ್ದಾದ್‌ನಲ್ಲಿ ವೈಮಾನಿಕ ದಾಳಿ ನಡೆಸಿ ಇರಾನ್ನ ಹಶೆದ್ ಅಲ್-ಶಾಬಿ ಮಿಲಿಟರಿ ಪಡೆಯ ಮೇಜರ್ ಜನರಲ್ ಕಾಸಿಮ್ ಸುಲೇಮಾನಿಯನ್ನು ಹತ್ಯೆ ಮಾಡಲಾಗಿತ್ತು. ಈ ಕೃತ್ಯದ ಹಿಂದೆ ಟ್ರಂಪ್ ಮತ್ತು 30 ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಇವರ ಮೇಲೆ ಕೊಲೆ ಮತ್ತು ಭಯೋತ್ಪಾದನೆ ಆರೋಪಗಳನ್ನು ಹೊರಿಸಲಾಗಿದೆ ಎಂದು ಇರಾನ್ನ ಪತ್ರಿಕೆ ವರದಿ ಮಾಡಿದೆ ಅಂತ ಪ್ರಾಸಿಕ್ಯೂಟರ್ ಅಲಿ ಅಲ್ಗಸಿಮೆಹ್ರ್(Ali Alqasimehr) ಹೇಳಿದ್ದಾರೆ.