ಜೆರುಸಲೆಮ್ (ಇಸ್ರೇಲ್): ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು ಕಡ್ಡಾಯವಾಗಿ ಮಾಸ್ಕ್ ಧರಿಸುವ ನಿಯಮವನ್ನು ಹಿಂಪಡೆಯಲಾಗಿದೆ ಮತ್ತು ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸಲಾಗಿದೆ.
ಶಿಶುವಿಹಾರದಿಂದ 12 ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳು ಶಾಲೆಗೆ ಮರಳಲಿದ್ದಾರೆ. ಸಣ್ಣ ಗುಂಪು ಸೇರಿ ಕಲಿಯುವಂತಹ "ಕ್ಯಾಪ್ಸುಲ್"ಗಳನ್ನು ರದ್ದುಪಡಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತರಗತಿಯಲ್ಲಿ ಮಾಸ್ಕ್ ಧರಿಸಿರಬೇಕೆಂದು ಶಿಕ್ಷಣ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಕಡಿಮೆ ಕೋವಿಡ್ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ತಜ್ಞರ ಸಲಹೆಯಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ನಿಯಮವನ್ನು ರದ್ದುಪಡಿಸಲಾಗಿದೆ. ಸೂಪರ್ ಮಾರ್ಕೆಟ್ಗಳಂತಹ ಇಕ್ಕಟ್ಟಿನ ಸ್ಥಳಗಳಲ್ಲಿ ಜನರು ಮಾಸ್ಕ್ ಧಾರಣೆ ಮಾಡಬೇಕು. ಮಾಸ್ಕ್ ಕೋವಿಡ್ ವೈರಸ್ ಹರಡುವುದನ್ನು ತಡೆಗಟ್ಟುತ್ತದೆ ಎಂದು ಇಸ್ರೇಲ್ ಆರೋಗ್ಯ ಸಚಿವ ಯೂಲಿ ಎಡೆಲ್‌ಸ್ಟೈನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.