ಗಾಜಾ: ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವಿನ ಯುದ್ಧದ ಪರಿಸ್ಥಿತಿ ಮುಂದುವರೆದಿದ್ದು, ಇದೀಗ ಅಲ್ಲಿನ ಸುದ್ದಿವಾಹಿನಿ ಗುರಿಯಾಗಿಸಿಕೊಂಡು ನಡೆದಿರುವ ವೈಮಾನಿಕ ದಾಳಿಯಲ್ಲಿ 13 ಅಂತಸ್ತಿನ ಕಟ್ಟಡ ಸಂಪೂರ್ಣವಾಗಿ ನೆಲಸಮವಾಗಿದೆ.
ಕತಾರ್ ಮೂಲದ ಅಲ್-ಜಜೀರಾ ದೂರದರ್ಶನ ಮತ್ತು ಅಮೆರಿಕದ ಸುದ್ದಿ ಸಂಸ್ಥೆಯ 13 ಮಹಡಿ ಕಟ್ಟಡ ಸಂಪೂರ್ಣವಾಗಿ ನೆಲಸಮವಾಗಿದ್ದು, ಇದರಲ್ಲಿ ಅನೇಕ ಅನೇಕ ಅಂತಾರಾಷ್ಟ್ರೀಯ ಪತ್ರಿಕಾ ಕಚೇರಿಗಳಿದ್ದವು ಎಂದು ತಿಳಿದು ಬಂದಿದೆ.
ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಇದಕ್ಕೆ ಸಂಬಂಧಿಸಿದಂತೆ ಅಲ್ ಜಜೀರಾ ಟ್ವೀಟ್ ಮೂಲಕ ಮಾಹಿತಿ ಸಹ ಹಂಚಿಕೊಂಡಿದೆ. ದಾಳಿ ಮಾಡುವುದಕ್ಕೂ ಒಂದು ಗಂಟೆ ಮುಂಚಿತವಾಗಿ ಎಚ್ಚರಿಕೆ ಸಹ ನೀಡಲಾಗಿತ್ತು ಎಂದು ಇಸ್ರೇಲ್ ಗುಪ್ತಚರ ಇಲಾಖೆ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮಂಗಳನ ಅಂಗಳದಲ್ಲಿ ಯಶಸ್ವಿಯಾಗಿ ರೋವರ್ ಇಳಿಸಿದ ಚೀನಾ
ಸೋಮವಾರದಿಂದ ಗಾಜಾದ ಮೇಲೆ ಇಸ್ರೇಲ್ ನಿರಂತರವಾಗಿ ವಾಯು ದಾಳಿ ನಡೆಸುತ್ತಿದ್ದು, ಇದರಲ್ಲಿ 39 ಮಕ್ಕಳು ಸೇರಿ 139 ಜನರು ಸಾವನ್ನಪ್ಪಿದ್ದಾರೆ. ಇದರ ಮಧ್ಯೆ ಸಾವಿರಕ್ಕೂ ಅಧಿಕ ಜನರು ಗಾಯಗೊಂಡಿದ್ದಾಗಿ ತಿಳಿದು ಬಂದಿದೆ.