ಇಸ್ಲಾಮಾಬಾದ್(ಪಾಕಿಸ್ತಾನ):26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಸಯೀದ್ ಹಫೀಜ್ಗೆ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯ 31 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದರ ಜೊತೆಗೆ 3 ಲಕ್ಷ 10 ಸಾವಿರ ರೂಪಾಯಿ ದಂಡ ಸಹ ವಿಧಿಸಿದೆ. ಭಯೋತ್ಪಾದನೆಗೆ ಕುಮ್ಮಕ್ಕು ನೀಡಲು ಹಣ ನೀಡಿರುವ ಎರಡು ಪ್ರಕರಣಗಳಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಹಫೀಜ್ ಸಯೀದ್ ಎಲ್ಲ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಪಾಕಿಸ್ತಾನದ ಆ್ಯಂಟಿ ಟೆರರ್ ಕೋರ್ಟ್ ಆದೇಶ ಹೊರಡಿಸಿದೆ. ಸದ್ಯ ಲಾಹೋರ್ ಜೈಲಿನಲ್ಲಿರುವ ಹಫೀಜ್ ವಿರುದ್ಧ ಒಟ್ಟು 41 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 25 ಪ್ರಕರಣಗಳು ಇತ್ಯರ್ಥಗೊಂಡಿವೆ. ಇದೀಗ ಎರಡು ಪ್ರಕರಣಗಳಲ್ಲಿ ಅವರಿಗೆ ಶಿಕ್ಷೆ ವಿಧಿಸಲಾಗಿದೆ.