ಉತ್ತರ ಕೆರೊಲಿನಾ, ಅಮೆರಿಕ: ಅಮೆರಿಕದಲ್ಲಿ ಗುಂಡಿನ ದಾಳಿಯ ಘಟನೆಗಳು ನಿಲ್ಲುವಂತೆ ಕಾಣುತ್ತಿಲ್ಲ. ಇದೀಗ ಅಮೆರಿಕದ ನಾರ್ತ್ ಕೆರೊಲಿನಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಸೇರಿ ಐವರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಅಮೆರಿಕದ ಉತ್ತರ ಕೆರೊಲಿನಾದಲ್ಲಿ ಗುರುವಾರ ನಡೆದ ಗುಂಡಿನ ದಾಳಿಯಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಸೇರಿದಂತೆ ಐದು ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮೇಯರ್ ತಿಳಿಸಿದರು.
ಮೇಯರ್ ಮೇರಿ-ಆನ್ ಬಾಲ್ಡ್ವಿನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದು ರೇಲಿ ನಗರಕ್ಕೆ ದುಃಖದ ಸುದ್ದಿ ಮತ್ತು ದುಃಖದ ದಿನವಾಗಿದೆ. ನಿನ್ನೆ ಸಂಜೆ 5 ಗಂಟೆಯ ನಂತರ ಹಲವಾರು ಜನರ ಮೇಲೆ ಗುಂಡಿನ ದಾಳಿ ನಡೆದಿದ್ದು, ಐದು ಜನರು ಮೃತಪಟ್ಟಿದ್ದಾರೆ. ಅವರಲ್ಲಿ ಒಬ್ಬರು ಆಫ್ ಡ್ಯೂಟಿ ರೇಲಿ ಪೊಲೀಸ್ ಅಧಿಕಾರಿಯೂ ಸಾವನ್ನಪ್ಪಿದ್ದಾರೆ ಎಂದು ಮೇಯರ್ ತಿಳಿಸಿದರು.