ಇಂಗ್ಲೆಂಡ್ : ಲಂಡನ್‌ನಲ್ಲಿ ಬಸವೇಶ್ವರರ 889ನೇ ಜನ್ಮದಿನವನ್ನು ಆಚರಿಸಲಾಗಿದೆ. ಈ ವೇಳೆ ಲಂಡನ್‌ನ ಬಸವೇಶ್ವರ ಪ್ರತಿಮೆಗೆ ಬ್ರಿಟನ್‌ನಲ್ಲಿರುವ ಭಾರತೀಯ ಹೈಕಮಿಷನರ್ ಶ್ರೀಮತಿ ಗಾಯಿತ್ರಿ ಇಸ್ಸಾರ್ ಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ, ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಲ್ಲಿಸಲಾಯಿತು. ಯುನೈಟೆಡ್ ಕಿಂಗ್‌ಡಮ್‌ನ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಈ ಕಾರ್ಯಕ್ರಮ ಆಯೋಜಿಸಿತ್ತು.
ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಬೇಕಾಗಿತ್ತು. ಆದರೆ ಕಾರಣಾಂತರದಿಂದ ಕಾರ್ಯಕ್ರಮಕ್ಕೆ ಹಾಜರಾಗದ ಹಿನ್ನೆಲೆ ಪ್ರಕಟಣೆ ಮೂಲಕ ಕನ್ನಡಿಗರಿಗೆ ಶ್ಲಾಘಿಸಿದ್ದಾರೆ. ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯ ಹೋಗಲಾಡಿಸುವ ಹೋರಾಟದಲ್ಲಿ ಬಸವೇಶ್ವರ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ನಡುವಿನ ಪರಿಕಲ್ಪನಾ ಸಂಬಂಧ ಎತ್ತಿ ಹಿಡಿದ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಪ್ರಯತ್ನಗಳನ್ನು ಉಲ್ಲೇಖಿಸಿದ್ದಾರೆ.