ಕಾಬೂಲ್:ಅಫ್ಘಾನಿಸ್ತಾನದಲ್ಲಿ ಭಾರಿ ಭೂಕಂಪ ಸಂಭವಿಸಿದೆ. ಪೂರ್ವ ಅಫ್ಘಾನಿಸ್ತಾನದ ಪಕ್ಟಿಕಾ ಪ್ರಾಂತ್ಯದಲ್ಲಿ ಉಂಟಾದ ಭೂಕಂಪದಲ್ಲಿ ಕನಿಷ್ಠ 1000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.1ರಷ್ಟಿತ್ತು. ಘಟನಾ ಸ್ಥಳದಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದು, ಹೆಲಿಕಾಪ್ಟರ್‌ಗಳ ಮೂಲಕ ರಕ್ಷಣಾ ಪಡೆ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. 90ಕ್ಕೂ ಹೆಚ್ಚು ಮನೆಗಳು ಧ್ವಂಸಗೊಂಡಿದ್ದು, ಅವಶೇಷಗಳಡಿ ಹಲವರು ಸಿಲುಕಿಕೊಂಡಿದ್ದಾರೆ. ಹಾಗೆ 600ಕ್ಕೂ ಹೆಚ್ಚಿನ ಜನ ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನದ ಖೋಸ್ಟ್ ನಗರದಿಂದ 44 ಕಿಲೋಮೀಟರ್ ದೂರದಲ್ಲಿ 51 ಕಿಲೋಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.