ವಾಷಿಂಗ್ಟನ್:ಅಫ್ಘಾನಿಸ್ತಾನದಲ್ಲಿ ಅಮೆರಿಕ ಡ್ರೋನ್ ದಾಳಿಯಲ್ಲಿ ಅಲ್-ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿ ಸಾವನ್ನಪ್ಪಿದ್ದಾರೆ ಎಂದು ಸೋಮವಾರ (ಸ್ಥಳೀಯ ಕಾಲಮಾನ) ವರದಿಯಾಗಿದೆ. ಟ್ವಿಟರ್‌ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಅವರ ಹತ್ಯೆಯನ್ನು ದೃಢಪಡಿಸಿದ್ದಾರೆ. ಜು. 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ವಾಯುದಾಳಿ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.
ಇಸ್ಲಾಮಿಕ್ ಎಮಿರೇಟ್‌ನ ಭದ್ರತೆ ಮತ್ತು ಗುಪ್ತಚರ ಸೇವೆಗಳು ಘಟನೆಯನ್ನು ತನಿಖೆ ಮಾಡಿದೆ ಮತ್ತು ಪ್ರಾಥಮಿಕ ಮಾಹಿತಿ ಪ್ರಕಾರ ಅಮೆರಿಕನ್ ಡ್ರೋನ್‌ನಿಂದ ದಾಳಿ ನಡೆಸಲಾಗಿದೆ. ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಯಾವುದೇ ನೆಪದಲ್ಲಿ ಈ ದಾಳಿಯನ್ನು ಬಲವಾಗಿ ಖಂಡಿಸುತ್ತದೆ ಮತ್ತು ಇದು ಅಂತಾರಾಷ್ಟ್ರೀಯ ತತ್ವಗಳು ಮತ್ತು ದೋಹಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಮುಜಾಹಿದ್ ಹೇಳಿದರು.