ಕರ್ನಾಟಕ

karnataka

ETV Bharat / international

ಜೋ ಬೈಡನ್ ಕೋವಿಡ್ ವರದಿ ನೆಗೆಟಿವ್ - ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾಗಿ : ಶ್ವೇತಭವನ - ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್

ಯುಎಸ್ ಅಧ್ಯಕ್ಷ ಜೋ ಬೈಡನ್ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಹೀಗಾಗಿ, ನವದೆಹಲಿಯಲ್ಲಿ ನಡೆಯಲಿರುವ G20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಗುರುವಾರ ಅವರು ಭಾರತಕ್ಕೆ ಪ್ರಯಾಣಿಸಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

US President Biden
ಯುಎಸ್ ಅಧ್ಯಕ್ಷ ಜೋ ಬೈಡನ್

By ETV Bharat Karnataka Team

Published : Sep 6, 2023, 10:55 AM IST

ವಾಷಿಂಗ್ಟನ್ : ಅಮೆರಿದ ಅಧ್ಯಕ್ಷ ಜೋ ಬೈಡನ್ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದ್ದು, ನೆಗೆಟಿವ್ ವರದಿ ಬಂದಿದೆ. ಈ ಹಿನ್ನೆಲೆ ನವದೆಹಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಗುರುವಾರ ಅವರು ಭಾರತಕ್ಕೆ ಪ್ರಯಾಣಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

ಶ್ವೇತಭವನದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರು, "ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷರು ಭಾರತಕ್ಕೆ ತೆರಳಲಿದ್ದಾರೆ. ಶುಕ್ರವಾರ ಪ್ರಧಾನಿ ಮೋದಿಯವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಶನಿವಾರ ಮತ್ತು ಭಾನುವಾರದಂದು ಜಿ 20 ಶೃಂಗಸಭೆಯ ಅಧಿಕೃತ ಅಧಿವೇಶನಗಳಲ್ಲಿ ಬೈಡನ್ ಭಾಗವಹಿಸಲಿದ್ದಾರೆ" ಎಂದು ಹೇಳಿದರು.

ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪ್ರಸ್ತುತ ಅವರಿಗೆ ಸೌಮ್ಯ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು, ಸದ್ಯಕ್ಕೆ ಡೆಲವೇರ್‌ನ ರೆಹೋಬೋತ್ ಬೀಚ್‌ನಲ್ಲಿರುವ ನಿವಾಸದಲ್ಲಿ ಹೋಮ್​ ಕ್ವಾರಂಟೈನ್​ ಆಗಿದ್ದಾರೆ. ಈ ಮಧ್ಯೆ ಯುಎಸ್ ಅಧ್ಯಕ್ಷ ಜೋ ಬೈಡನ್ ಆರೋಗ್ಯವಾಗಿದ್ದು, ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಸಂಪರ್ಕ ಅಧಿಕಾರಿ ಎಲಿಜಬೆತ್ ಅಲೆಕ್ಸಾಂಡರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ :ಜಿ20 ಶಂಗಸಭೆ, 'ಭಾರತ' ಫೈಟ್​ ನಡುವೆ ರಾಹುಲ್​ ಗಾಂಧಿ ಒಂದು ವಾರ ಯುರೋಪ್​ ಪ್ರವಾಸ; ಅನಿವಾಸಿ ಭಾರತೀಯರೊಂದಿಗೆ ಸಂವಾದ

ಶ್ವೇತಭವನದ ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ ಬೈಡನ್ ಅವರಿಗೆ ಕೋವಿಡ್ -19 ವೈರಸ್​ ಪಾಸಿಟಿವ್ ಎಂದು ದೃಢಪಟ್ಟ ಬಳಿಕ ಅಧ್ಯಕ್ಷ ಬೈಡನ್ ಅವರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಯಿತು. ಇತ್ತೀಚಿನ ವಾರಗಳಲ್ಲಿ ಅಮೆರಿದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಹೊಸ ಕೋವಿಡ್​-19 ರೂಪಾಂತರ EG.5 ನ ಹರಡುವಿಕೆ ದೇಶದಲ್ಲಿ ಹೆಚ್ಚುತ್ತಿದೆ ಎಂದು ತಿಳಿಸಿದೆ.

ಇದನ್ನೂ ಓದಿ :G20 Summit : ಜಿ20 ಶೃಂಗಸಭೆಯಲ್ಲಿ ಕ್ಸಿ ಜಿನ್‌ಪಿಂಗ್ ಪಾಲ್ಗೊಳ್ಳಲಿದ್ದಾರೆ : ಜೋ ಬೈಡನ್ ವಿಶ್ವಾಸ

ನವದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿರುವ G20 ಶೃಂಗಸಭೆಯಲ್ಲಿ ಅಮೆರಿಕದ ಅಧ್ಯಕ್ಷ ಬೈಡನ್​​ ಅವರು ಜಾಗತಿಕ ಸಮಸ್ಯೆಗಳನ್ನು ನಿಭಾಯಿಸಲು ಜಂಟಿ ಪ್ರಯತ್ನ ನಡೆಸುವ ಕುರಿತಂತೆ ಚರ್ಚೆ ನಡೆಸಲಿದ್ದಾರೆ. ಕ್ಲೀನ್ ಇಂಧನ ಪರಿವರ್ತನೆ ಮತ್ತು ಹವಾಮಾನ ಬದಲಾವಣೆ ವಿರುದ್ಧ ಹೋರಾಡಲು ಹಾಗೂ ಉಕ್ರೇನ್‌ನಲ್ಲಿ ರಷ್ಯಾ ನಡೆಸುತ್ತಿರುವ ಯುದ್ಧದ ಆರ್ಥಿಕ ಮತ್ತು ಸಾಮಾಜಿಕ ಪರಿಣಾಮಗಳನ್ನು ತಗ್ಗಿಸುವ ಕುರಿತು ಶೃಂಗಸಭೆಯಲ್ಲಿ ಅಮೆರಿಕ ಪ್ರಸ್ತಾಪಿಸಲಿದೆ. ಅಷ್ಟೇ ಅಲ್ಲದೇ, ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳ ಸಾಮರ್ಥ್ಯ ಹೆಚ್ಚಳ, ಬಡತನ ವಿರುದ್ಧದ ಹೋರಾಟ ಹಾಗೂ ಪ್ರಪಂಚಾದ್ಯಂತ ದೇಶಗಳನ್ನು ಬಾಧಿಸುತ್ತಿರುವ ಮಹತ್ವದ ಅಂತಾರಾಷ್ಟ್ರೀಯ ಸವಾಲುಗಳ ಬಗ್ಗೆ ಜಿ 20 ಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದು ಶ್ವೇತಭವನದ ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ. (ಪಿಟಿಐ)

ಇದನ್ನೂ ಓದಿ :ನವದೆಹಲಿಯಲ್ಲಿ ಜಿ20 ಶೃಂಗ : ಅಮೆರಿಕ ಅಧ್ಯಕ್ಷ ಜೋ ಬೈಡನ್​​​​​​​​​​​ ನಾಲ್ಕು ದಿನಗಳ ಭಾರತ ಪ್ರವಾಸ

ABOUT THE AUTHOR

...view details