ವಾಷಿಂಗ್ಟನ್(ಅಮೆರಿಕ):ಜೋ ಬೈಡನ್ ಅವರು ಮುಂದಿನ ತಿಂಗಳು ದಕ್ಷಿಣ ಕೊರಿಯಾ ಮತ್ತು ಜಪಾನ್‌ಗೆ ಪ್ರಯಾಣಿಸಲು ಸಿದ್ಧರಾಗಿದ್ದಾರೆ. ಜಪಾನ್ನ ಟೋಕಿಯೊದಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಬೈಡನ್ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೈಡನ್ ಭೇಟಿ ಮಾಡಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. ಬೈಡನ್ ಅವರ ದಕ್ಷಿಣ ಕೊರಿಯಾ ಮತ್ತು ಜಪಾನ್ ಪ್ರವಾಸವನ್ನು ಮೇ 20ರಿಂದ 24ರವರೆಗೆ ನಿಗದಿಪಡಿಸಲಾಗಿದೆ.
ಬೈಡನ್ ಅವರ ಪ್ರವಾಸವು ಮುಕ್ತ ಇಂಡೋ - ಪೆಸಿಫಿಕ್‌ಗೆ ಅಮೆರಿಕದ ಬದ್ಧತೆಯನ್ನು ಮುನ್ನಡೆಸುವಂತೆ ಮಾಡುತ್ತದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಬುಧವಾರ ಮಾಹಿತಿ ನೀಡಿದ್ದಾರೆ. ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೆಲ್ ಮತ್ತು ಜಪಾನ್ ಪ್ರಧಾನಿ ಕಿಶಿಡಾ ಫ್ಯೂಮಿಯೊ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ಬೈಡನ್ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.