ಜೋಹಾನ್ಸ್‌ಬರ್ಗ್(ದಕ್ಷಿಣ ಆಫ್ರಿಕಾ):15ನೇ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಸೌತ್ ಆಫ್ರಿಕಾದ ಜೋಹಾನ್ಸ್‌ಬರ್ಗ್ ತಲುಪಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾದಿಂದಲೇ ಮೋದಿ ವರ್ಚುಯಲ್ ಆಗಿ ಐತಿಹಾಸಿಕ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ವೀಕ್ಷಣೆ ಮಾಡಲಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ 3 ಚಂದ್ರನ ಅಜ್ಞಾತ ದಕ್ಷಿಣ ಧ್ರುವದಲ್ಲಿ ಇಳಿಯುವ ಮೂಲಕ ಇತಿಹಾಸ ಸೃಷ್ಟಿಸಲು ಸಿದ್ಧವಾಗಿದೆ ಎಂದು ಹೇಳಿದೆ.
ದೇಶಾದ್ಯಂತ ಪೂಜೆ ಪ್ರಾರ್ಥನೆ: ಇಂದು ಸಂಜೆ 6.04ಕ್ಕೆ ಸಾಫ್ಟ್ ಲ್ಯಾಂಡಿಂಗ್ ಸಮಯ ನಿಗದಿಪಡಿಸಲಾಗಿದೆ. ಭಾರತದ ಈ ಐತಿಹಾಸಿಕ ಪ್ರಯತ್ನಕ್ಕೆ ವಿಶ್ವಾದ್ಯಂತ ಶುಭಾಶಯಗಳ ಮಹಾಪೂರ ಹರಿದು ಬರುತ್ತಿವೆ. ಲಂಡನ್‌ನ ಆಕ್ಸ್‌ಬ್ರಿಡ್ಜ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ಸಂಶೋಧನಾ ವಿದ್ವಾಂಸರು ಚಂದ್ರಯಾನ-3 ಯಶಸ್ವಿಯಾಗಿ ಆದ್ಯ ಶಕ್ತಿ ಮಾತಾಜಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಚಂದ್ರಯಾನ-3 ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಲಿ ಎಂದು ಭಾರತೀಯ ಡಯಾಸ್ಪೊರಾ ಸದಸ್ಯರು ಯುಎಸ್‌ನ ವರ್ಜೀನಿಯಾದ ದೇವಸ್ಥಾನದಲ್ಲಿ ಹವನ ಮಾಡಿದರು. ಐತಿಹಾಸಿಕ ಕ್ಷಣಕ್ಕೆ ಮುಂಚಿತವಾಗಿ ದೇಶಾದ್ಯಂತ ಪೂಜೆ ಪ್ರಾರ್ಥನೆಗಳು ನಡೆಯುತ್ತಿವೆ. ಭಾರತದ 3ನೇ ಚಂದ್ರಯಾನದ ಐತಿಹಾಸಿಕ ಕ್ಷಣದ ಮೊದಲು ಋಷಿಕೇಶದಲ್ಲಿ ಗಂಗಾ ಆರತಿ ನಡೆಸಲಾಯಿತು.
ಭುವನೇಶ್ವರ, ವಾರಾಣಸಿ ಮತ್ತು ಪ್ರಯಾಗ್‌ರಾಜ್‌ನಲ್ಲಿ ಭಕ್ತರ ಗುಂಪು ಪೂಜೆ ಸಲ್ಲಿಸಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿಯಲು ಪ್ರಾರ್ಥನೆ ಸಲ್ಲಿಸಿತು. ವಡೋದರದ ಮಕ್ಕಳು ಚಂದ್ರಯಾನ-3 ಸುರಕ್ಷಿತವಾಗಿ ಇಳಿಯಲು ಪ್ರಾರ್ಥನೆ ಸಲ್ಲಿಸಿದರು. ಲಕ್ನೋದಲ್ಲಿ, ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್‌ಗಾಗಿ ಜನರು ಇಸ್ಲಾಮಿಕ್ ಸೆಂಟರ್ ಆಫ್ ಇಂಡಿಯಾದಲ್ಲಿ ನಮಾಜ್ ಮಾಡಿದರು.