ಇಸ್ಲಾಮಾಬಾದ್(ಪಾಕಿಸ್ತಾನ): ಪಾಕಿಸ್ತಾನದಲ್ಲಿ ರಾಜಕೀಯ ಕೋಲಾಹಲ ತೀವ್ರಗೊಂಡಿದೆ. ಇಮ್ರಾನ್ ಖಾನ್ ಸರ್ಕಾರ ಪತನಕ್ಕಾಗಿ ಪ್ರತಿಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಇದರ ಬೆನ್ನಲ್ಲೇ ಪ್ರಧಾನಿ ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿ ಅವರ ಆಪ್ತ ಸ್ನೇಹಿತೆ ಫರಾಹ್ ಖಾನ್ ಬಂಧನದ ಭೀತಿಯಿಂದಾಗಿ ಪಾಕಿಸ್ತಾನ ತೊರೆದಿದ್ದಾಳೆ ಎಂದು ಹೇಳಲಾಗುತ್ತಿದೆ.
ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಸರ್ಕಾರ ಅಸ್ತಿತ್ವದಲ್ಲಿದ್ದ ಸಂದರ್ಭದಲ್ಲಿ ಫರಾಹ್ ಖಾನ್ ಆಸ್ತಿಯಲ್ಲಿ ಗಣನೀಯ ಮಟ್ಟದಲ್ಲಿ ಏರಿಕೆ ಕಂಡು ಬಂದಿದ್ದು, ಇದೀಗ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದರೆ, ಬಂಧನವಾಗಬಹುದು ಎಂಬ ಭಯದಲ್ಲಿ ಅವರು ಪಲಾಯನ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ. ಅವರು ಈಗಾಗಲೇ ಅಮೆರಿಕಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಇದಕ್ಕೆ ಪುಷ್ಠಿ ನೀಡುವ ಪೋಟೋ ಕೂಡ ವೈರಲ್ ಆಗಿದೆ.