ದಾವೋಸ್/ಬೆಂಗಳೂರು : ಆಕ್ಸಿಸ್ ಬ್ಯಾಂಕ್ ಸಂಸ್ಥೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಆಕ್ಸಿಸ್ ಬ್ಯಾಂಕ್ ನ ವ್ಯಸ್ಥಾಪಕ ನಿರ್ದೇಶಕರ ಹಾಗೂ ಸಿಇಒ ಅಮಿತಾಬ್ ಚೌಧರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಆಕ್ಸಿಸ್ ಬ್ಯಾಂಕ್ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಹಲವು ಯೋಜನೆಗಳನ್ನು ಕೈಗೊಳ್ಳಲು ಅವಕಾಶವಿದೆ. ಸಂಸ್ಥೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಆಕ್ಸಿಸ್ ಬ್ಯಾಂಕ್ ಸಂಸ್ಥೆಯು ಭಾರತದ ಮೂರನೇ ದೊಡ್ಡ ಖಾಸಗಿ ವಲಯದ ಬ್ಯಾಂಕ್ ಆಗಿದೆ. ಬೃಹತ್, ಮಧ್ಯಮ ಉದ್ದಿಮೆಗಳಿಗೆ, ಸಣ್ಣ ಕೈಗಾರಿಕೆ , ಕೃಷಿ ಹಾಗೂ ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ಸೌಲಭ್ಯಗಳನ್ನು ನೀಡುತ್ತಿದ್ದು, ದೇಶಾದ್ಯಂತ 4000 ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಸಿಂಗಾಪುರ, ಹಾಂಕಾಂಗ್, ದುಬೈ ಸೇರಿದಂತೆ ಅನೇಕ ದೇಶಗಳಲ್ಲಿ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ.