ಲಂಡನ್:ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಭಾನುವಾರ 10 ಡೌನಿಂಗ್ ಸ್ಟ್ರೀಟ್‌ನಲ್ಲಿ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರನ್ನು ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ಪರವಾಗಿ ದೀಪಾವಳಿಯ ಶುಭಾಶಯಗಳನ್ನು ಕೋರಿದರು. ಎಸ್ ಜೈಶಂಕರ್ ಅವರು ತಮ್ಮ ಪತ್ನಿ ಕ್ಯೋಕೋ ಜೈಶಂಕರ್ ಅವರೊಂದಿಗೆ ಯುಕೆ ಪ್ರಧಾನಿಯನ್ನು ಭೇಟಿಯಾಗಿ ಗಣೇಶನ ವಿಗ್ರಹವನ್ನು ಮತ್ತು ಭಾರತೀಯ ಬ್ಯಾಟರ್ ವಿರಾಟ್ ಕೊಹ್ಲಿ ಸಹಿ ಮಾಡಿದ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದರು. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ಯುಕೆ ಪ್ರಧಾನಿ ಕಾರ್ಯಾಲಯವು ಎಕ್ಸ್ (ಟ್ವಿಟ್ಟರ್) ನಲ್ಲಿ ಪೋಸ್ಟ್ ಮಾಡಿದೆ.
ಯುಕೆ ಪ್ರಧಾನಮಂತ್ರಿ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಸಾಮಾಜಿಕ ಮಾಧ್ಯಮ ವೇದಿಕೆಯ ಅಧಿಕೃತ ಹ್ಯಾಂಡಲ್‌ನಲ್ಲಿ ಭಾರತ ಮತ್ತು ಯುಕೆ ಪ್ರಸ್ತುತ ಸಮಯದೊಂದಿಗೆ ನಮ್ಮ ಸಂಬಂಧಗಳನ್ನು ಬೆಳೆಸಲು ಮತ್ತು ಬಲಪಡಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇವೆ. ಜಗತ್ತಿನಾದ್ಯಂತ ಇರುವ ಎಲ್ಲಾ ಭಾರತೀಯರಿಗೆ ದೀಪಾವಳಿಯ ಶುಭಾಶಯಗಳು ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಪ್ರಸ್ತುತ ಬ್ರಿಟನ್ ಪ್ರವಾಸದಲ್ಲಿದ್ದಾರೆ. ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳನ್ನು ಪರಿಶೀಲಿಸುವ ಮತ್ತು "ಸೌಹಾರ್ದ ಸಂಬಂಧಗಳಿಗೆ ಹೊಸ ವೇಗ" ನೀಡುವ ಉದ್ದೇಶದಿಂದ ಜೈಶಂಕರ್ ಅವರು ಐದು ದಿನಗಳ ಬ್ರಿಟನ್ ಭೇಟಿಗಾಗಿ ಲಂಡನ್‌ಗೆ ತೆರಳಿದ್ದಾರೆ. ಈ ಸಮಯದಲ್ಲಿ ಅವರು ತಮ್ಮ ಯುಕೆ ಕೌಂಟರ್ಪಾರ್ಟ್ ಜೇಮ್ಸ್ ಕ್ಲೆವರ್ಲಿ ಅವರೊಂದಿಗೆ ಸಭೆ ನಡೆಸಲು ನಿರ್ಧರಿಸಿದ್ದಾರೆ. ಶನಿವಾರ ಬ್ರಿಟನ್ ತಲುಪಿರುವ ಅವರು ನವೆಂಬರ್ 15 ರಂದು ಹಿಂದುರುಗಲಿದ್ದಾರೆ. ಜೈಶಂಕರ್ ಅವರು ತಮ್ಮ ಭೇಟಿಯ ವೇಳೆ ಇತರ ಹಲವು ಗಣ್ಯರನ್ನು ಸಹ ಭೇಟಿಯಾಗಲಿದ್ದಾರೆ.