ಹೊನಿಯಾರಾ:ಸೊಲೊಮನ್ ದ್ವೀಪದ ಮಲಂಗೋದಲ್ಲಿ ಇಂದು ಮುಂಜಾನೆ ಭೂಮಿ ಕಂಪಿಸಿದ್ದು, ಜನರು ಭಯಭೀತರಾಗಿದ್ದಾರೆ. ರಿಕ್ಟರ್ ಮಾಪಕದಲ್ಲಿ 7.0 ರಷ್ಟು ತೀವ್ರತೆ ದಾಖಲಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಬೆಳಗ್ಗೆ 7.33ಕ್ಕೆ ಭೂಮಿ ನಡುಗಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಸದ್ಯಕ್ಕೆ ಯಾವುದೇ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ನಿನ್ನೆ(ಸೋಮವಾರ) ಇಂಡೋನೇಷ್ಯಾದ ಪ್ರಮುಖ ದ್ವೀಪ ಜಾವಾದಲ್ಲಿ ಸಂಭವಿಸಿದ ಭೂಕಂಪಕ್ಕೆ ಈವರೆಗೆ 162 ಮಂದಿ ಬಲಿಯಾಗಿದ್ದಾರೆ.
ಸೊಲೊಮನ್ ದ್ವೀಪಗಳಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆ ದಾಖಲು
ಇಂಡೋನೇಷ್ಯಾದ ನಂತರ ಈಗ ಸೊಲೊಮನ್ ದ್ವೀಪಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ.
ಸಾಂದರ್ಭಿಕ ಚಿತ್ರ