ನವದೆಹಲಿ: ಇಂದು ಮುಂಜಾನೆ 3.52ರ ಸುಮಾರಿಗೆ ಭಾರತದ ಗಡಿ ರಾಷ್ಟ್ರವಾದ ಮ್ಯಾನ್ಮಾರ್‌ನ ಬರ್ಮಾದಲ್ಲಿ 5.2 ತೀವ್ರತೆಯ ಭೂಕಂಪನದ ಅನುಭವವಾಗಿದೆ. ಭೂಕಂಪನದ ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ ಭೂಕಂಪದ 140 ಕಿ.ಮೀ. ಆಳದಲ್ಲಿ ಸಂಭವಿಸಿದೆ. ಯಾವುದೇ ಸಾವು, ನೋವಿನ ಬಗ್ಗೆ ವರದಿಯಾಗಿಲ್ಲ.
ಮ್ಯಾನ್ಮಾರ್‌ನ ಬರ್ಮಾದಲ್ಲಿ ಭೂಕಂಪವಾದ ಹಿನ್ನೆಲೆಯಲ್ಲಿ ದೇಶದ ಗಡಿ ರಾಜ್ಯಗಳಾದ ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮಣಿಪುರ ರಾಜ್ಯಗಳಲ್ಲಿ ಭೂಮಿ ಕಂಪಿಸಿರುವ ಸಾಧ್ಯತೆ ಇದೆ.