ಇಸ್ಲಾಮಾಬಾದ್ (ಪಾಕಿಸ್ತಾನ):ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ವಜಾಗೊಳಿಸಿರುವುದು 'ಅಸಾಂವಿಧಾನಿಕ ನಡೆ' ಎಂದು ಪಾಕಿಸ್ತಾನದ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಮೂಲಕ ಪಾಕಿಸ್ತಾನದಲ್ಲಿ ನಡೆಯುತ್ತಿರುವ ರಾಜಕೀಯ ಗೊಂದಲದ ನಡುವೆ ಇಮ್ರಾನ್ ಖಾನ್‌ಗೆ ದೊಡ್ಡ ಹೊಡೆತ ಬಿದ್ದಿದೆ. ಪರಿಣಾಮ, ಇಮ್ರಾನ್ ಖಾನ್ ಏಪ್ರಿಲ್ 9ರಂದು ಅವಿಶ್ವಾಸ ಯಾಚಿಸಲೇ ಬೇಕಿದೆ.
ಪಾಕ್ ಸುಪ್ರೀಂಕೋರ್ಟ್‌ನಲ್ಲಿ ಇಮ್ರಾನ್‌ಖಾನ್‌ಗೆ ಸೋಲು; 24 ಗಂಟೆಯೊಳಗೆ ವಿಶ್ವಾಸ ಮತಯಾಚಿಸಲು ಆದೇಶ!
ಪಾಕಿಸ್ತಾನದ ಸುಪ್ರೀಂಕೋರ್ಟ್ ಇಂದು ಮಹತ್ವದ ಆದೇಶ ನೀಡಿದ್ದು, ಪ್ರಧಾನಿ ದೇಶದ ಸಂವಿಧಾನಕ್ಕೆ ಬದ್ಧರಾಗಿರುತ್ತಾರೆ. ಆದ್ದರಿಂದ ಅವರು ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸುವಂತೆ ಅಧ್ಯಕ್ಷರಿಗೆ ಸಲಹೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು.
ಇಮ್ರಾನ್ ಖಾನ್‌ಗೆ ಸುಪ್ರಿಂ ಕೋರ್ಟ್ ನಿಂದ ತೀವ್ರ ಹಿನ್ನಡೆ:
ಪ್ರಧಾನಿ ಸಂವಿಧಾನಕ್ಕೆ ಬದ್ಧರಾಗಿರುತ್ತಾರೆ. ಆದ್ದರಿಂದ ಅವರು ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸುವಂತೆ ಅಧ್ಯಕ್ಷರಿಗೆ ಸಲಹೆ ನೀಡಲು ಸಾಧ್ಯವಿಲ್ಲ ಎಂದು ಆದೇಶದಲ್ಲಿ ಹೇಳಿದೆ. ರಾಷ್ಟ್ರೀಯ ಅಸೆಂಬ್ಲಿಯನ್ನು ಪುನರ್ ರಚಿಸಲಾಗಿದ್ದು, ಅಧಿವೇಶನವನ್ನು ಕರೆಯಲು ಸ್ಪೀಕರ್‌ಗೆ ಆದೇಶಿಸಲಾಗಿದೆ ಎಂದು ಕೋರ್ಟ್ ತಿಳಿಸಿದೆ. ಕಳೆದ ಬಾನುವಾರ ಇಮ್ರಾನ್ ಖಾನ್ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಮತದಾನ ಪ್ರಕ್ರಿಯೆಯನ್ನು ಡೆಪ್ಯುಟಿ ಸ್ಪೀಕರ್ ಖಾಸಿಮ್ ಸೂರಿ ವಜಾಗೊಳಿಸಿದ್ದರು.
TAGGED:
Faces No-Trust Vote On Saturday