ಬೀಜಿಂಗ್ (ಚೀನಾ):ಭಾರತೀಯ ರಾಯಭಾರಿ ಪ್ರದೀಪ್ ಕುಮಾರ್ ರಾವತ್ ಅವರು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಇಂದು ಬೀಜಿಂಗ್‌ನಲ್ಲಿ ಭೇಟಿಯಾದರು. 14ನೇ ಬ್ರಿಕ್ಸ್ ಶೃಂಗಸಭೆಗೂ ಮುನ್ನ ಹಾಗು ಪೂರ್ವ ಲಡಾಖ್‌ನಲ್ಲಿ ಕಳೆದ ಎರಡು ವರ್ಷಗಳ ಮಿಲಿಟರಿ ಬಿಕ್ಕಟ್ಟಿನ ಬಗ್ಗೆ ಇಬ್ಬರೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ಭೇಟಿಯ ಕುರಿತು ಚೀನಾ ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದೆ. ಚೀನಾ ಮತ್ತು ಭಾರತದ ಸಾಮಾನ್ಯ ಹಿತಾಸಕ್ತಿಗಳು ಭಿನ್ನಾಭಿಪ್ರಾಯಗಳನ್ನು ಮೀರಿಸುತ್ತವೆ ಎಂದು ವಾಂಗ್ ಹೇಳಿದ್ದಾರೆ. ಎರಡೂ ಕಡೆಯವರು ಪರಸ್ಪರರ ವಿರುದ್ಧ ಕಾವಲು ಕಾಯುವ ಬದಲು ಸಹಕಾರವನ್ನು ಬಲಪಡಿಸಬೇಕು ಮತ್ತು ಸುಧಾರಿಸಬೇಕು. ಒಬ್ಬರನ್ನೊಬ್ಬರು ಅನುಮಾನಿಸುವ ಬದಲು ಪರಸ್ಪರ ನಂಬಿಕೆಯಿಂದ ಇರಬೇಕು ಎಂದಿದ್ದಾರೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.