ಬಾಗ್ದಾದ್(ಇರಾಕ್):ಇರಾಕ್‌ನ ಎರ್ಬಿಲ್‌ನಲ್ಲಿರುವ ಯುಎಸ್ ಕಾನ್ಸುಲೇಟ್ ಸಮೀಪ ಮಂಗಳವಾರ ಒಂದರ ಹಿಂದೊಂದರಂತೆ ಹಲವು ಬಾಂಬ್ ಸ್ಫೋಟಗಳು ಸಂಭವಿಸಿವೆ. ಇರಾನ್‌ನ ರೆವಲ್ಯೂಷನರಿ ಗಾರ್ಡ್ ದಾಳಿಯ ಹೊಣೆ ಹೊತ್ತುಕೊಂಡಿದೆ. ಕುರ್ದಿಶ್ ಪ್ರದೇಶದಲ್ಲಿನ ಇಸ್ರೇಲಿ ಗುಪ್ತಚರ ಸಂಸ್ಥೆಯಾದ ಮೊಸಾದ್‌ನ ಪ್ರಧಾನ ಕಚೇರಿ ಮತ್ತು ಈ ಪ್ರದೇಶದ ಕೆಲವು ಭಾಗಗಳಲ್ಲಿರುವ ಇರಾನ್ ವಿರೋಧಿ ಭಯೋತ್ಪಾದಕ ಸಂಘಟನೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಲಾಗಿದೆ ಎಂದು ಇರಾನ್‌ನ ರೆವಲ್ಯೂಷನರಿ ಗಾರ್ಡ್ ಹೇಳಿದೆ. ಅಮೆರಿಕದ ಸೇನಾ ಸಿಬ್ಬಂದಿಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಎಬಿಸಿ ನ್ಯೂಸ್ ವರದಿ ಮಾಡಿದೆ.
8 ಸ್ಥಳಗಳ ಮೇಲೆ ದಾಳಿ:ಎರ್ಬಿಲ್ ವಿಮಾನ ನಿಲ್ದಾಣದ ಬಳಿ ರೆವಲ್ಯೂಷನರಿ ಗಾರ್ಡ್ ಅಮೆರಿಕದ ಮೂರು ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಎಬಿಸಿ ನ್ಯೂಸ್ ಪ್ರಕಾರ, ಈ ದಾಳಿಯ ನಂತರ ಎರ್ಬಿಲ್ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ.