ವಾಷಿಂಗ್ಟನ್ :ಅಮೆರಿಕದಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಗುಂಡಿನ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅಧ್ಯಕ್ಷ ಜೋ ಬೈಡನ್, ಮಕ್ಕಳು ಮತ್ತು ಕುಟುಂಬಗಳನ್ನು ರಕ್ಷಿಸುವ ಸಲುವಾಗಿ ಯುಎಸ್ ಆಕ್ರಮಣಕಾರಿ ಶಸ್ತ್ರಾಸ್ತ್ರಗಳನ್ನು ನಿಷೇಧಿಸುವ ಅಗತ್ಯವಿದೆ. ಹಾಗಾಗಿ, ಶಸ್ತ್ರಾಸ್ತ್ರಗಳನ್ನು ಖರೀದಿಸಲು ಕನಿಷ್ಠ ವಯಸ್ಸನ್ನು 18 ರಿಂದ 21ಕ್ಕೆ ಹೆಚ್ಚಿಸಬೇಕು ಎಂದು ಹೇಳಿದರು.
ಶ್ವೇತಭವನದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು, "ನಾವು ಆಕ್ರಮಣಕಾರಿ ಶಸ್ತ್ರಾಸ್ತ್ರಗಳನ್ನು ನಿಷೇಧಿಸಬೇಕಾಗಿದೆ. ನಮಗೆ ಸಾಧ್ಯವಾಗದಿದ್ದರೆ, ಅವುಗಳನ್ನು ಖರೀದಿಸಲು ವಯಸ್ಸನ್ನು ಹೆಚ್ಚಿಸಬೇಕು. ಜತೆಗೆ ಬಂದೂಕು ತಯಾರಕರ ಹೊಣೆಗಾರಿಕೆಯಿಂದ ವಿನಾಯಿತಿಯನ್ನು ರದ್ದುಗೊಳಿಸಿ ಎಂದರು.
ಇದು ಯಾರ ಹಕ್ಕುಗಳನ್ನು ಕಸಿದುಕೊಳ್ಳುವ ಬಗ್ಗೆ ಅಲ್ಲ, ಇದು ನಮ್ಮ ಮಕ್ಕಳನ್ನು, ಕುಟುಂಬಗಳನ್ನು ಹಾಗೂ ಸಮುದಾಯಗಳನ್ನು ರಕ್ಷಿಸುವ ಬಗ್ಗೆ. ಅಲ್ಲದೇ ಶಾಲೆಗೆ, ಕಿರಾಣಿ ಅಂಗಡಿಗೆ ಹಾಗೂ ಚರ್ಚ್‌ಗೆ ಹೋಗಲು ನಮ್ಮ ಸ್ವಾತಂತ್ರ್ಯವನ್ನು ರಕ್ಷಿಸುವ ಬಗೆ ಎಂದರು.