ಇಸ್ಲಾಮಾಬಾದ್ ( ಪಾಕಿಸ್ತಾನ):ದೇಶದಲ್ಲಿನ ಮೊದಲ ಎಂಪಾಕ್ಸ್ ಪ್ರಕರಣ ದಾಖಲಾಗಿದೆ ಎಂದು ಪಾಕಿಸ್ತಾನದ ಆರೋಗ್ಯ ಸಚಿವಾಲಯವು ಮಂಗಳವಾರ ಘೋಷಿಸಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಎಂಪಾಕ್ಸ್ ರೋಗವನ್ನು ಮೊದಲು ಮಂಕಿಪಾಕ್ಸ್ ಎಂದು ಕರೆಯಲಾಗುತ್ತಿತ್ತು. ಪಾಕಿಸ್ತಾನದಲ್ಲಿ ಮೊದಲ ಪ್ರಕರಣ ಪತ್ತೆಯಾದ ನಂತರ ದೇಶದ ಎಲ್ಲಾ ವಿಮಾನ ನಿಲ್ದಾಣದ ಅಧಿಕಾರಿಗಳು ರೋಗ ಹರಡದಂತೆ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ.
ಗಡಿ ಆರೋಗ್ಯ ಸೇವೆ ಸಂಪೂರ್ಣ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಸಾಂಕ್ರಾಮಿಕ ರೋಗಗಳು ಸಾರ್ವಜನಿಕರಿಗೆ ಹರಡದಂತೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗದುಕೊಳ್ಳಲಾಗುತ್ತಿದೆ ಎಂದು ಪಾಕಿಸ್ತಾನ ಸಚಿವಾಲಯವು ತಿಳಿಸಿದೆ. ಕಳೆದ ವರ್ಷದಿಂದ ವಿಶ್ವದಲ್ಲಿ ಎಂಪಾಕ್ಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ವಿಶ್ವ ಆರೋಗ್ಯ ಸಂಸ್ಥೆಯ ಮಾಹಿತಿ ಪ್ರಕಾರ ಜನವರಿ 1, 2022 ಮತ್ತು ಏಪ್ರಿಲ್ 24, 2023 ರ ನಡುವೆ ಸುಮಾರು 87,113 ದೃಢಪಡಿಸಿದ ಪ್ರಕರಣಗಳು ವರದಿಯಾಗಿವೆ. ಎಂಪಾಕ್ಸ್ ರೋಗವು ಸಾಂಪ್ರದಾಯಿಕವಾಗಿ ಮಧ್ಯ ಮತ್ತು ಪಶ್ಚಿಮ ಆಫ್ರಿಕಾದ ಪ್ರದೇಶಗಳಿಗೆ ಸೀಮಿತವಾಗಿದೆ. ಇದರ ಲಕ್ಷಣ ಜ್ವರ, ಶೀತ, ಇತ್ಯಾದಿ.
ರೋಗಲಕ್ಷಣಗಳು ಮತ್ತು ಚಿಕಿತ್ಸೆ ಹೇಗೆ:ಜ್ವರ ಪಾಕ್ಸ್‌ನ ಕೆಲವು ಸಾಮಾನ್ಯ ಲಕ್ಷಣಗಳೆಂದರೆ ಸ್ನಾಯು ನೋವು, ತಲೆನೋವು, ಜ್ವರ, ಕಡಿಮೆ ಶಕ್ತಿ ಮತ್ತು ದುಗ್ಧರಸ ಗ್ರಂಥಿಗಳು ಊದಿಕೊಳ್ಳುವುದು. ಎಐಐಎಂಎಸ್‌ನ ವೈದ್ಯಕೀಯ ವಿಭಾಗದ ಡಾ. ಪಿಯೂಷ್ ರಂಜನ್ ಅವರ ಪ್ರಕಾರ, ಮಂಕಿಪಾಕ್ಸ್ ಲಕ್ಷಣಗಳು ಸಿಡುಬು ಮತ್ತು ಚಿಕನ್‌ಪಾಕ್ಸ್‌ನಂತಿವೆ. ರೋಗಿಗಳಿಗೆ ಜ್ವರ ಮತ್ತು ದುಗ್ಧರಸ ಗ್ರಂಥಿಗಳ ಹಿಗ್ಗುವಿಕೆ ಕಾಣಿಸಿಕೊಳ್ಳುತ್ತದೆ. 1-5 ದಿನಗಳ ನಂತರ ರೋಗಿಯು ಮುಖ, ಅಂಗೈಗಳಲ್ಲಿ ದದ್ದುಗಳು ಕಾಣಿಸಬಹುದು.