ನ್ಯೂಯಾರ್ಕ್(ಅಮೆರಿಕ):ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 77ನೇ ಅಧಿವೇಶನದಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್, "ಇದು ಯುದ್ಧದ ಸಮಯವಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ" ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಕಳೆದ ಕೆಲವೇ ದಿನಗಳ ಹಿಂದೆ ಉಜ್ಬೇಕಿಸ್ತಾನದ ಸಮರ್ಖಂಡ್ನಲ್ಲಿ ಆಯೋಜಿಸಿದ್ದ ಎರಡು ದಿನಗಳ ಶಾಂಘೈ ಸಹಕಾರ ಸಂಘಟನೆಯ(ಎಸ್‌ಸಿಒ) ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದ ಅವರು, "ಇದು ಯುದ್ಧದ ಸಮಯವಲ್ಲ. ಉಕ್ರೇನ್ ಜೊತೆಗಿನ ಸಂಘರ್ಷ ಕೊನೆಗೊಳಿಸಿ" ಎಂದು ಕಿವಿಮಾತು ಹೇಳಿದ್ದರು. ಇದಕ್ಕೆ ಅಮೆರಿಕ ಸೇರಿದಂತೆ ಜಾಗತಿದ ಮಾಧ್ಯಮಗಳು ಮೆಚ್ಚುಗೆ ಸೂಚಿಸಿದ್ದವು.