ಇಸ್ಲಾಮಾಬಾದ್:ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಗುರುವಾರ ಲೆಫ್ಟಿನೆಂಟ್ ಜನರಲ್ ಅಸಿಮ್ ಮುನೀರ್ ಅವರನ್ನು ಹೊಸ ಸೇನಾ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದ್ದಾರೆ. ಪ್ರಸ್ತುತ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ಕಮರ್ ಜಾವೇದ್ ಬಾಜ್ವಾ ಅವರು ಮೂರು ವರ್ಷಗಳ ವಿಸ್ತರಣೆಯ ನಂತರ ನವೆಂಬರ್ 29 ರಂದು ನಿವೃತ್ತರಾಗಲಿದ್ದಾರೆ.
ಸಚಿವ ಮರಿಯುಮ್ ಔರಂಗಜೇಬ್ ಅವರು, ಜಂಟಿ ಮುಖ್ಯಸ್ಥರ ಸಮಿತಿಯ (CJCSC) ಅಧ್ಯಕ್ಷರಾಗಿ ಲೆಫ್ಟಿನೆಂಟ್ ಜನರಲ್ ಸಾಹಿರ್ ಶಂಶಾದ್ ಮಿರ್ಜಾ ಅವರನ್ನು ಆಯ್ಕೆ ಮಾಡಲಾಗಿದೆ. ಹಾಗೆ ನೇಮಕಾತಿಗಳ ಮಾಹಿತಿಗಳನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.