ಕರ್ನಾಟಕ

karnataka

ETV Bharat / international

ತಕ್ಷಣ ಇಮ್ರಾನ್ ಖಾನ್ ಬಿಡುಗಡೆಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್​ ಆದೇಶ - release of Imran Khan

ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಬಂಧನವನ್ನು ಕಾನೂನು ಬಾಹಿರ ಎಂದು ಪಾಕಿಸ್ತಾನ ಸುಪ್ರೀಂ ಕೋರ್ಟ್​ ಹೇಳಿದೆ.

Imran Khan
ಇಮ್ರಾನ್ ಖಾನ್

By

Published : May 11, 2023, 7:42 PM IST

ಇಸ್ಲಾಮಾಬಾದ್ (ಪಾಕಿಸ್ತಾನ): ಪಿಟಿಐ ಅಧ್ಯಕ್ಷ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನವನ್ನು ಕಾನೂನುಬಾಹಿರ ಎಂದು ಹೇಳಿರುವ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಅವರನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಆದೇಶಿಸಿದೆ. ಜೊತೆಗೆ ಪ್ರಕರಣ ಸಂಬಂಧ ಇಸ್ಲಾಮಾಬಾದ್ ಹೈಕೋರ್ಟನ್ನು ಸಂಪರ್ಕಿಸುವಂತೆ ಸುಪ್ರೀಂ ಇಮ್ರಾನ್​ಗೆ ಸೂಚಿಸಿದೆ.

ಇದೇ ಮೇ 9ರಂದು ಇಮ್ರಾನ್​ ಖಾನ್​ ಅವರನ್ನು ಪಾಕಿಸ್ತಾನ ಸೇನೆ ಬಂಧಿಸಿತ್ತು. ಈ ಸಂಬಂಧ ಇಮ್ರಾನ್​ ಖಾನ್​ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಉಮರ್ ಅತಾ ಬಂಡಿಯಲ್ ಅವರು ಬಿಡುಗಡೆಗೆ ಆದೇಶಿಸಿದ್ದಾರೆ. ಇಮ್ರಾನ್​ ಖಾನ್​ ಬಂಧನ ನಂತರ ಪಾಕಿಸ್ತಾನ ಹೊತ್ತಿ ಉರಿಯುತ್ತಿದೆ. ದೇಶದಲ್ಲಿ ಶಾಂತಿ ನೆಲೆಸಲು ನ್ಯಾಯಾಲಯವು ಬಯಸಿದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಇನ್ನು, ಒಂದು ಗಂಟೆ ಒಳಗಡೆ ಇಮ್ರಾನ್​ ಖಾನ್​ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಸುಪ್ರೀಂ ಕೋರ್ಟ್​ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಉಮರ್ ಅತಾ ಬಂಡಿಯಲ್ ನೇತೃತ್ವದ ತ್ರಿಸದಸ್ಯ ಪೀಠವು ನ್ಯಾಯಮೂರ್ತಿ ಮುಹಮ್ಮದ್ ಅಲಿ ಮಝರ್ ಮತ್ತು ನ್ಯಾಯಮೂರ್ತಿ ಅಥರ್ ಮಿನಲ್ಲಾ ಅವರನ್ನು ಒಳಗೊಂಡಿತ್ತು.

ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಉಮರ್ ಅತಾ ಬಂಡಿಯಲ್ ಅವರು ಇಸ್ಲಾಮಾಬಾದ್ ಹೈಕೋರ್ಟ್ ಆವರಣದಿಂದ ಪಿಟಿಐ ನಾಯಕನನ್ನು ಬಂಧಿಸಿರುವುದು ದೇಶದ ನ್ಯಾಯಾಂಗ ವ್ಯವಸ್ಥೆಗೆ ಮಾಡಿದ ದೊಡ್ಡ ಅವಮಾನ ಎಂದು ಹೇಳಿದ್ದಾರೆ. ಈ ಕೂಡಲೇ ಇಮ್ರಾನ್​ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದ್ದಾರೆ.

ಪ್ರಕರಣ ವಿಚಾರಣೆಯ ಆರಂಭದಲ್ಲಿ, ಇಮ್ರಾನ್​ ಖಾನ್​ ಪರ ವಕೀಲ ಹಮೀದ್ ಖಾನ್, ಇಮ್ರಾನ್​ ಅವರು ತಮ್ಮ ಮಧ್ಯಂತರ ಜಾಮೀನನ್ನು ವಿಸ್ತರಣೆ ಮಾಡುವಂತೆ ಇಸ್ಲಾಮಾಬಾದ್​​ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಲ್ಲದೆ ಸೈನಿಕರು ಇಮ್ರಾನ್ ಖಾನ್ ಅವರ ಜೊತೆ ಅನುಚಿತವಾಗಿ ವರ್ತಿಸಿದರು ಮತ್ತು ಬಂಧಿಸಿದರು ಆರೋಪಿಸಿದರು.

ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಿಟಿಐ (ತೆಹ್ರೀಕ್-ಇ-ಇನ್ಸಾಫ್ ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್ ಹೊರಗೆ ಪಾಕಿಸ್ತಾನದ ಸೈನಿಕರು ಮಂಗಳವಾರ ಬಂಧಿಸಿದ್ದರು. ಅಲ್ ಖಾದಿರ್ ಟ್ರಸ್ಟ್ ಹಗರಣ ಪ್ರಕರಣದಲ್ಲಿ ಇಮ್ರಾನ್ ಖಾನ್ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಇಸ್ಲಾಮಾಬಾದ್​ ಹೈಕೋರ್ಟ್​ ಬಂದಿದ್ದಾಗ ಇಮ್ರಾನ್​ ಖಾನ್​ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ :ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಅರೆಸ್ಟ್​..

ABOUT THE AUTHOR

...view details