ಇಸ್ಲಾಮಾಬಾದ್, ಪಾಕಿಸ್ತಾನ: ನೆರೆಯ ಶ್ರೀಲಂಕಾದಲ್ಲಿ ಇದ್ದಂತೆ ಪಾಕಿಸ್ತಾನದಲ್ಲೂ ವಿದ್ಯುತ್ ಕೊರತೆ ಕಾಣಿಸಿಕೊಳ್ಳುತ್ತಿದೆ. ಒಂದು ದಿನಕ್ಕೆ 21,500 ಮೆಗಾವ್ಯಾಟ್ನಷ್ಟು ವಿದ್ಯುತ್ ಬೇಡಿಕೆ ಇದ್ದು, ಕೇವಲ 15,500 ಮೆಗಾವ್ಯಾಟ್ ವಿದ್ಯುತ್ ಅನ್ನು ಉತ್ಪಾದನೆ ಮಾಡಲು ಸಾಧ್ಯವಾಗುತ್ತಿದೆ. 6000 ಮೆಗಾವ್ಯಾಟ್ ವಿದ್ಯುತ್ ಕೊರತೆ ಎದುರಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ವಿದ್ಯುತ್ ಉತ್ಪಾದನೆ ಕಡಿಮೆಯಾಗಲು ಇಂಧನ ಕೊರತೆ ಮತ್ತು ತಾಂತ್ರಿಕ ಸಮಸ್ಯೆಗಳು ಕಾರಣ ಎಂದು ಹೇಳಲಾಗುತ್ತಿದೆ.
ಪಾಕಿಸ್ತಾನದ ಇಂಧನ ಸಚಿವಾಲಯದ ಮೂಲಗಳ ಪ್ರಕಾರ, ಪಾಕಿಸ್ತಾನದಲ್ಲಿ ಒಟ್ಟು 33,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯವಿದೆ. ಆದರೆ, ಅಲ್ಲಿನ ಸರ್ಕಾರದ ಜಲವಿದ್ಯುತ್ ಸ್ಥಾವರಗಳು 1,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿದರೆ, ಖಾಸಗಿ ವಲಯದ ವಿದ್ಯುತ್ ಸ್ಥಾವರಗಳು 12,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತವೆ. ಉಷ್ಣ ವಿದ್ಯುತ್ ಸ್ಥಾವರಗಳು 2,500 ಮೆಗಾವ್ಯಾಟ್ ಉತ್ಪಾದಿಸುತ್ತವೆ. ಇದರಿಂದ ಭಾರಿ ಪ್ರಮಾಣದಲ್ಲಿ ವಿದ್ಯುತ್ ಕೊರತೆ ಕಂಡು ಬರುತ್ತಿದ್ದು, ಒಂದು ದಿನಕ್ಕೆ 10 ಬಿಲಿಯನ್ ರೂಪಾಯಿ ನಷ್ಟವಾಗುತ್ತಿದೆ.