ಕರ್ನಾಟಕ

karnataka

ETV Bharat / international

ಜರ್ಮನಿಯಲ್ಲಿ ಪ್ರಧಾನಿ ಮೋದಿ: ಇಂದು ಜಿ-7 ಶೃಂಗಸಭೆಯಲ್ಲಿ ಭಾಗಿ, ಪ್ರಮುಖ ವಿಷಯಗಳ ಬಗ್ಗೆ ಚರ್ಚೆ - ಹವಾಮಾನ ಬದಲಾವಣೆ ಸೇರಿದಂತೆ ಹಲವು ವಿಷಯಗಳ ಕುರಿತು ಮೋದಿ ಚರ್ಚೆ

ಇಂದು ಪ್ರಧಾನಿ ಮೋದಿ ಜಿ-7 ಸಭೆಯಲ್ಲಿ ಭಾಗವಹಿಸಲಿದ್ದು, ಜಿ-7 ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಲಿದ್ದಾರೆ. ಇಂಧನಕ್ಕೆ ಸಂಬಂಧಿಸಿದಂತೆ ತಮ್ಮ ಕ್ರಿಯಾ ಯೋಜನೆ ಪ್ರಸ್ತುತಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

pm-modi-in-germany-will-attend-the-48th-summit-of-g-7-today
ಜರ್ಮನಿಯಲ್ಲಿ ಪ್ರಧಾನಿ ಮೋದಿ

By

Published : Jun 27, 2022, 8:01 AM IST

ಬರ್ಲಿನ್( ಜರ್ಮನಿ): 48ನೇ ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಜರ್ಮನಿ ಪ್ರವಾಸ ಕೈಗೊಂಡಿದ್ದು, ಮ್ಯೂನಿಚ್‌ನಲ್ಲಿ ನಡೆಯಲಿರುವ ಜಿ-7 ಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈ ಶೃಂಗದಲ್ಲಿ ಪರಿಸರ, ಹವಾಮಾನ ಬದಲಾವಣೆ ಸೇರಿದಂತೆ ಹಲವು ವಿಷಯಗಳ ಕುರಿತು ಪ್ರಧಾನಿ ವಿವಿಧ ದೇಶಗಳ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಎರಡು ದಿನಗಳ ಜರ್ಮನಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ನಿನ್ನೆ ಭಾರಿ ಸ್ವಾಗತ ದೊರೆಯಿತು. ಇನ್ನು ಜರ್ಮನಿಯಲ್ಲಿರುವ ಭಾರತದ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು. ಇಂದು ಅವರು ಜಿ-7 ಸಭೆಯಲ್ಲಿ ಭಾಗವಹಿಸಲಿದ್ದು, ಜಿ-7 ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಲಿದ್ದಾರೆ. ಇಂಧನಕ್ಕೆ ಸಂಬಂಧಿಸಿದಂತೆ ತಮ್ಮ ಕ್ರಿಯಾ ಯೋಜನೆ ಪ್ರಸ್ತುತಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಜಿ- 7 ರ ಶೃಂಗಸಭೆಯಲ್ಲಿ ಭಯೋತ್ಪಾದನೆ ವಿಷಯದ ಬಗ್ಗೆಯೂ ಪ್ರಮುಖವಾಗಿ ಚರ್ಚೆ ನಡೆಯಲಿದೆ. ಇದರ ಜತೆಗೆ ಆಹಾರ ಭದ್ರತೆ, ಆರೋಗ್ಯ ವಿಷಯದ ಬಗ್ಗೆ ಚರ್ಚಿಸಬಹುದು ಎಂದು ಹೇಳಲಾಗುತ್ತಿದೆ. ಜಿ-7 ಸದಸ್ಯ ರಾಷ್ಟ್ರಗಳ ಮುಖ್ಯಸ್ಥರು ಮತ್ತು ನಾಯಕರನ್ನು ಭೇಟಿ ಮಾಡುವ ಮೂಲಕ ಪ್ರಧಾನಿ ಮೋದಿ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಲಿದ್ದಾರೆ.

ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಿ ಮಾತನಾಡಿದ್ದೇನು?:ವಿದೇಶದಲ್ಲಿರುವಪ್ರತಿಯೊಬ್ಬರಲ್ಲೂ ಭಾರತದ ಸಂಸ್ಕೃತಿ, ಏಕತೆ ಮತ್ತು ಭ್ರಾತೃತ್ವದ ಮನೋಭಾವವನ್ನು ನಾನಿಂದು ಕಾಣುತ್ತಿದ್ದೇನೆ ಎಂದು ಭಾರತೀಯ ಸಮುದಾಯ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಹೇಳಿದರು. ಕೊರೊನಾ ಸಮಯದಲ್ಲಿ ಭಾರತ ಸರ್ಕಾರ 80 ಕೋಟಿ ಬಡವರಿಗೆ ಉಚಿತ ಆಹಾರಧಾನ್ಯ ವಿತರಿಸಿ ಹಸಿವು ನೀಗಿಸಿದೆ ಎಂದು ಮೋದಿ ಹೇಳಿದರು.

ಇದನ್ನು ಓದಿ:ವಿಡಿಯೋ: ಜರ್ಮನಿಗೆ ಬಂದಿಳಿದ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ

ABOUT THE AUTHOR

...view details