ಪಂಜಾಬ್ ಪ್ರಾಂತ್ಯ(ಪಾಕಿಸ್ತಾನ):ಗರ್ಭಿಣಿಯೊಬ್ಬರ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದ್ದು, ಐವರು ದುಷ್ಕರ್ಮಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೋಸ್ಕರ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.
ಅಲ್ಲಿನ ಸುದ್ದಿಸಂಸ್ಥೆಗಳು ವರದಿ ಮಾಡಿರುವ ಪ್ರಕಾರ, ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೇಲಂ ನಗರದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿ ಮೇಲೆ ಐವರು ಕಾಮುಕರು ಸಾಮೂಹಿಕವಾಗಿ ದುಷ್ಕೃತ್ಯವೆಸಗಿದ್ದಾರೆ. ಮಹಿಳೆಯ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಕೃತ್ಯಕ್ಕೂ ಮೊದಲು ಮಹಿಳೆಯ ಪತಿಯನ್ನ ಕಟ್ಟಿಹಾಕಿದ್ದಾರೆ ಎನ್ನಲಾಗಿದೆ.