ಕರ್ನಾಟಕ

karnataka

ETV Bharat / international

ಜೂನ್ 22 ರಂದು ಮೋದಿ ಅಮೆರಿಕಕ್ಕೆ: ಶ್ವೇತಭವನದಲ್ಲಿ ಜೋ ಬೈಡನ್‌ ಅದ್ಧೂರಿ ಔತಣಕೂಟ

ಪ್ರಧಾನಿ ನರೇಂದ್ರ ಮೋದಿ ಜೂನ್‌ 22 ರಂದು ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

President Biden
ಮೋದಿ, ಬೈಡನ್

By

Published : May 11, 2023, 9:32 AM IST

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಮುಂದಿನ ಜೂನ್‌ ತಿಂಗಳ 22 ರಂದು ಅಮೆರಿಕಕ್ಕೆ ಭೇಟಿ ನೀಡಲಿದ್ದು, ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ಅಧ್ಯಕ್ಷ ಬೈಡನ್​ ಮತ್ತು ಪ್ರಥಮ ಮಹಿಳೆ ಡಾ.ಜಿಲ್ ಬೈಡನ್ ಅವರು ನರೇಂದ್ರ ಮೋದಿ ಅವರಿಗೆ ಆತಿಥ್ಯ ನೀಡಲಿದ್ದಾರೆ. ಈ ಭೇಟಿಯು ಅಮೆರಿಕ ಮತ್ತು ಭಾರತದ ನಡುವಿನ ಆಳವಾದ ಮತ್ತು ನಿಕಟ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ. ಅಮೆರಿಕನ್ನರು ಮತ್ತು ಭಾರತೀಯರ ಸ್ನೇಹ ಬಂಧಗಳನ್ನೂ ಮತ್ತಷ್ಟು ದೃಢಪಡಿಸಲಿದೆ" ಎಂದು ಶ್ವೇತಭವನ ಹೇಳಿದೆ.

"ಚೀನಾದ ಆಕ್ರಮಣಕಾರಿ ನಡವಳಿಕೆಯ ನಡುವೆ ಮುಕ್ತ, ಸಮೃದ್ಧ ಮತ್ತು ಸುರಕ್ಷಿತ ಇಂಡೋ-ಪೆಸಿಫಿಕ್‌ಗೆ ಎರಡು ದೇಶಗಳ ಹಂಚಿಕೆಯ ಬದ್ಧತೆಯನ್ನು ಮತ್ತಷ್ಟು ಬಲಪಡಿಸಲಾಗುವುದು. ಹವಾಮಾನ ಬದಲಾವಣೆಯಿಂದ ಉಂಟಾಗುವ ಸಾಮಾನ್ಯ ಸವಾಲುಗಳನ್ನು ಎದುರಿಸುವ ಬಗೆ, ಉದ್ಯೋಗವಕಾಶಗಳು, ಆರೋಗ್ಯ ಭದ್ರತೆ, ರಕ್ಷಣೆ, ಇಂಧನ ಮತ್ತು ಬಾಹ್ಯಾಕಾಶ ಸೇರಿದಂತೆ ದ್ವಿಪಕ್ಷೀಯ ಕಾರ್ಯತಂತ್ರದ ತಂತ್ರಜ್ಞಾನ ಪಾಲುದಾರಿಕೆ ಕುರಿತು ಚರ್ಚೆ ನಡೆಸಲಾಗುವುದು. ಶೈಕ್ಷಣಿಕ ಕ್ಷೇತ್ರ ಸೇರಿದಂತೆ ಎರಡು ದೇಶಗಳ ಜನರ ನಡುವಿನ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸುವ ಮಾರ್ಗಗಳನ್ನು ಉನ್ನತೀಕರಿಸುವ ಕುರಿತು ಉಭಯ ನಾಯಕರು ಚರ್ಚಿಸುತ್ತಾರೆ ಎಂದು ಕರೀನ್ ಮಾಹಿತಿ ನೀಡಿದ್ದಾರೆ.

"ಜೋ ಬೈಡನ್ ಅವರ ಆಹ್ವಾನದ ಮೇರೆಗೆ ಪ್ರಧಾನಿಯವರ ಮುಂಬರುವ ಅಧಿಕೃತ ರಾಜ್ಯ ಭೇಟಿಯು ಐತಿಹಾಸಿಕವಾಗಿರಲಿದೆ. ಉಭಯ ನಾಯಕರ​ ದ್ವಿಪಕ್ಷೀಯ ಮಾತುಕತೆಯು ನಮ್ಮ ನಡುವಿನ ಬಾಂಧವ್ಯಕ್ಕೆ ಹೊಸ ಚೈತನ್ಯ ನೀಡಲಿದೆ" ಎಂದು ಯುಎಸ್‌ನಲ್ಲಿರುವ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ಆಶಾಭಾವ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :ಅಮೆರಿಕದ ದೇಶೀಯ ನೀತಿ ಸಲಹೆಗಾರರಾಗಿ ಭಾರತೀಯ ಮೂಲದ ನೀರಾ ಟಂಡೆನ್ ಆಯ್ಕೆ

2009 ರ ನವೆಂಬರ್ ತಿಂಗಳಿನಲ್ಲಿ ಅಂದಿನ ಅಧ್ಯಕ್ಷ ಬರಾಕ್ ಒಬಾಮಾ ಅವರು ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ರಾಜ್ಯ ಭೇಟಿಗೆ ಆಹ್ವಾನಿಸಿದ ನಂತರ ಇದು ಭಾರತೀಯ ನಾಯಕರ ಮೊದಲ ರಾಜ್ಯ ಭೇಟಿಯಾಗಿದೆ. ಸೆಪ್ಟೆಂಬರ್‌ನಲ್ಲಿ ಭಾರತ ಆಯೋಜಿಸಿರುವ ಜಿ 20 ಶೃಂಗಸಭೆಗೂ ಮುನ್ನವೇ ಪ್ರಧಾನಿ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು.

ಇದನ್ನೂ ಓದಿ :ಮೇ ತಿಂಗಳಲ್ಲಿ ಜಿ-7 ಶೃಂಗಸಭೆ: ಅಮೆರಿಕ ಅಧ್ಯಕ್ಷ ಜೋ ಬೈಡನ್​ ಭಾಗಿ

2014 ರಲ್ಲಿ ಪ್ರಧಾನಿಯಾದ ನಂತರ ಮೋದಿ ಅಮೆರಿಕದ ಮೂವರು ಅಧ್ಯಕ್ಷರಾದ ಒಬಾಮಾ, ಡೊನಾಲ್ಡ್ ಟ್ರಂಪ್ ಮತ್ತು ಈಗ ಬೈಡನ್ ಅವರೊಂದಿಗೆ ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಮಾತುಕತೆಗಾಗಿ ಯುನೈಟೆಡ್ ಸ್ಟೇಟ್​ಗೆ 6ಕ್ಕಿಂತಲೂ ಹೆಚ್ಚು ಬಾರಿ ಪ್ರವಾಸ ಮಾಡಿದ್ದಾರೆ. ಆದರೆ, ಇದು ಮೊದಲ ಬಾರಿಗೆ ಅಧಿಕೃತ ರಾಜ್ಯ ಭೇಟಿಗಾಗಿ ನೀಡುತ್ತಿರುವ ಆಹ್ವಾನವಾಗಿದೆ. ಅಮೆರಿಕವು ತನ್ನ ಮಿತ್ರರಾಷ್ಟ್ರಗಳಿಗೆ ಮಾತ್ರ ನೀಡುವ ವಿಶೇಷ ಆಹ್ವಾನ ಇದಾಗಿದೆ.

ABOUT THE AUTHOR

...view details